Isaiah 13 - ASV (Kannada)
1 The burden of Babylon, which Isaiah the son of Amoz did see.ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
2 Set ye up an ensign upon the bare mountain, lift up the voice unto them, wave the hand, that they may go into the gates of the nobles.ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
3 I have commanded my consecrated ones, yea, I have called my mighty men for mine anger, even my proudly exulting ones.ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
4 The noise of a multitude in the mountains, as of a great people! the noise of a tumult of the kingdoms of the nations gathered together! Jehovah of hosts is mustering the host for the battle.ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
5 They come from a far country, from the uttermost part of heaven, even Jehovah, and the weapons of his indignation, to destroy the whole land.ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
6 Wail ye; for the day of Jehovah is at hand; as destruction from the Almighty shall it come.ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
7 Therefore shall all hands be feeble, and every heart of man shall melt:ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
8 and they shall be dismayed; pangs and sorrows shall take hold `of them'; they shall be in pain as a woman in travail: they shall look in amazement one at another; their faces `shall be' faces of flame.ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
9 Behold, the day of Jehovah cometh, cruel, with wrath and fierce anger; to make the land a desolation, and to destroy the sinners thereof out of it.ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
10 For the stars of heaven and the constellations thereof shall not give their light; the sun shall be darkened in its going forth, and the moon shall not cause its light to shine.ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
11 And I will punish the world for `their' evil, and the wicked for their iniquity: and I will cause the arrogancy of the proud to cease, and will lay low the haughtiness of the terrible.ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
12 I will make a man more rare than fine gold, even a man than the pure gold of Ophir.ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
13 Therefore I will make the heavens to tremble, and the earth shall be shaken out of its place, in the wrath of Jehovah of hosts, and in the day of his fierce anger.ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
14 And it shall come to pass, that as the chased roe, and as sheep that no man gathereth, they shall turn every man to his own people, and shall flee every man to his own land.ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
15 Every one that is found shall be thrust through; and every one that is taken shall fall by the sword.ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
16 Their infants also shall be dashed in pieces before their eyes; their houses shall be rifled, and their wives ravished.ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
17 Behold, I will stir up the Medes against them, who shall not regard silver, and as for gold, they shall not delight in it.ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
18 And `their' bows shall dash the young men in pieces; and they shall have no pity on the fruit of the womb; their eye shall not spare children.ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
19 And Babylon, the glory of kingdoms, the beauty of the Chaldeans' pride, shall be as when God overthrew Sodom and Gomorrah.ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
20 It shall never be inhabited, neither shall it be dwelt in from generation to generation: neither shall the Arabian pitch tent there; neither shall shepherds make their flocks to lie down there.ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
21 But wild beasts of the desert shall lie there; and their houses shall be full of doleful creatures; and ostriches shall dwell there, and wild goats shall dance there.ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.
22 And wolves shall cry in their castles, and jackals in the pleasant palaces: and her time is near to come, and her days shall not be prolonged.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Kannada Bible