Isaiah 33 - ASV (Kannada)
1 Woe to thee that destroyest, and thou wast not destroyed; and dealest treacherously, and they dealt not treacherously with thee! When thou hast ceased to destroy, thou shalt be destroyed; and when thou hast made an end of dealing treacherously, they shall deal treacherously with thee.ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
2 O Jehovah, be gracious unto us; we have waited for thee: be thou our arm every morning, our salvation also in the time of trouble.ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
3 At the noise of the tumult the peoples are fled; at the lifting up of thyself the nations are scattered.ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
4 And your spoil shall be gathered as the caterpillar gathereth: as locusts leap shall men leap upon it.ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
5 Jehovah is exalted; for he dwelleth on high: he hath filled Zion with justice and righteousness.ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
6 And there shall be stability in thy times, abundance of salvation, wisdom, and knowledge: the fear of Jehovah is thy treasure.ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
7 Behold, their valiant ones cry without; the ambassadors of peace weep bitterly.ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
8 The highways lie waste, the wayfaring man ceaseth: `the enemy' hath broken the covenant, he hath despised the cities, he regardeth not man.ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
9 The land mourneth and languisheth; Lebanon is confounded and withereth away; Sharon is like a desert; and Bashan and Carmel shake off `their leaves'.ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
10 Now will I arise, saith Jehovah; now will I lift up myself; now will I be exalted.ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11 Ye shall conceive chaff, ye shall bring forth stubble: your breath is a fire that shall devour you.ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
12 And the peoples shall be as the burnings of lime, as thorns cut down, that are burned in the fire.ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
13 Hear, ye that are far off, what I have done; and, ye that are near, acknowledge my might.ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
14 The sinners in Zion are afraid; trembling hath seized the godless ones: Who among us can dwell with the devouring fire? who among us can dwell with everlasting burnings?ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
15 He that walketh righteously, and speaketh uprightly; he that despiseth the gain of oppressions, that shaketh his hands from taking a bribe, that stoppeth his ears from hearing of blood, and shutteth his eyes from looking upon evil:ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
16 He shall dwell on high; his place of defence shall be the munitions of rocks; his bread shall be given `him'; his waters shall be sure.ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
17 Thine eyes shall see the king in his beauty: they shall behold a land that reacheth afar.ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
18 Thy heart shall muse on the terror: Where is he that counted, where is he that weighed `the tribute'? where is he that counted the towers?ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
19 Thou shalt not see the fierce people, a people of a deep speech that thou canst not comprehend, of a strange tongue that thou canst not understand.ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
20 Look upon Zion, the city of our solemnities: thine eyes shall see Jerusalem a quiet habitation, a tent that shall not be removed, the stakes whereof shall never be plucked up, neither shall any of the cords thereof be broken.ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
21 But there Jehovah will be with us in majesty, a place of broad rivers and streams, wherein shall go no galley with oars, neither shall gallant ship pass thereby.ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
22 For Jehovah is our judge, Jehovah is our lawgiver, Jehovah is our king; he will save us.ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
23 Thy tacklings are loosed; they could not strengthen the foot of their mast, they could not spread the sail: then was the prey of a great spoil divided; the lame took the prey.ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.
24 And the inhabitant shall not say, I am sick: the people that dwell therein shall be forgiven their iniquity.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Kannada Bible