Bible

Isaiah 49 - WEB (Kannada)

1 Listen, isles, to me; and listen, you peoples, from far: Yahweh has called me from the womb; from the bowels of my mother has he made mention of my name:1 ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

2 and he has made my mouth like a sharp sword; in the shadow of his hand has he hid me: and he has made me a polished shaft; in his quiver has he kept me close:ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

3 and he said to me, You are my servant; Israel, in whom I will be glorified.ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.

4 But I said, I have labored in vain, I have spent my strength for nothing and vanity; yet surely the justice [due] to me is with Yahweh, and my recompense with my God.ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

5 Now says Yahweh who formed me from the womb to be his servant, to bring Jacob again to him, and that Israel be gathered to him (for I am honorable in the eyes of Yahweh, and my God is become my strength);ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

6 yes, he says, It is too light a thing that you should be my servant to raise up the tribes of Jacob, and to restore the preserved of Israel: I will also give you for a light to the Gentiles, that you may be my salvation to the end of the earth.ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

7 Thus says Yahweh, the Redeemer of Israel, [and] his Holy One, to him whom man despises, to him whom the nation abhors, to a servant of rulers: Kings shall see and arise; princes, and they shall worship; because of Yahweh who is faithful, [even] the Holy One of Israel, who has chosen you.ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

8 Thus says Yahweh, In an acceptable time have I answered you, and in a day of salvation have I helped you; and I will preserve you, and give you for a covenant of the people, to raise up the land, to make them inherit the desolate heritage:ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.

9 saying to those who are bound, Go forth; to those who are in darkness, Show yourselves. They shall feed in the ways, and on all bare heights shall be their pasture.ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.

10 They shall not hunger nor thirst; neither shall the heat nor sun strike them: for he who has mercy on them will lead them, even by springs of water will he guide them.ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.

11 I will make all my mountains a way, and my highways shall be exalted.ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.

12 Behold, these shall come from far; and, behold, these from the north and from the west; and these from the land of Sinim.ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್‌ ದೇಶದಿಂದ ಬರುತ್ತಿದ್ದಾರೆ.

13 Sing, heavens; and be joyful, earth; and break forth into singing, mountains: for Yahweh has comforted his people, and will have compassion on his afflicted.ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.

14 But Zion said, Yahweh has forsaken me, and the Lord has forgotten me.ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.

15 Can a woman forget her sucking child, that she should not have compassion on the son of her womb? yes, these may forget, yet I will not forget you.ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.

16 Behold, I have engraved you on the palms of my hands; your walls are continually before me.ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

17 Your children make haste; your destroyers and those who made you waste shall go forth from you.ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.

18 Lift up your eyes round about, and see: all these gather themselves together, and come to you. As I live, says Yahweh, you shall surely clothe you with them all as with an ornament, and gird yourself with them, like a bride.ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.

19 For, as for your waste and your desolate places, and your land that has been destroyed, surely now shall you be too small for the inhabitants, and those who swallowed you up shall be far away.ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

20 The children of your bereavement shall yet say in your ears, The place is too small for me; give place to me that I may dwell.ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.

21 Then shall you say in your heart, Who has conceived these for me, seeing I have been bereaved of my children, and am solitary, an exile, and wandering back and forth? and who has brought up these? Behold, I was left alone; these, where were they?ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.

22 Thus says the Lord Yahweh, Behold, I will lift up my hand to the nations, and set up my ensign to the peoples; and they shall bring your sons in their bosom, and your daughters shall be carried on their shoulders.ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.

23 Kings shall be your nursing fathers, and their queens your nursing mothers: they shall bow down to you with their faces to the earth, and lick the dust of your feet; and you shall know that I am Yahweh; and those who wait for me shall not be disappointed.ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.

24 Shall the prey be taken from the mighty, or the lawful captives be delivered?ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ?

25 But thus says Yahweh, Even the captives of the mighty shall be taken away, and the prey of the terrible shall be delivered; for I will contend with him who contends with you, and I will save your children.ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

26 I will feed those who oppress you with their own flesh; and they shall be drunken with their own blood, as with sweet wine: and all flesh shall know that I, Yahweh, am your Savior, and your Redeemer, the Mighty One of Jacob.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

Kannada Bible