Isaiah 62 - BBE (Kannada)
1 Because of Zion I will not keep quiet, and because of Jerusalem I will take no rest, till her righteousness goes out like the shining of the sun, and her salvation like a burning light.ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
2 And the nations will see your righteousness, and all kings your glory: and you will have a new name, given by the mouth of the Lord.ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
3 And you will be a fair crown in the hand of the Lord, and a king's head-dress in the hand of your God.ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
4 You will not now be named, She who is given up; and your land will no longer be named, The waste land: but you will have the name, My pleasure is in her, and your land will be named, Married: for the Lord has pleasure in you, and your land will be married.ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
5 For as a young man takes a virgin for his wife, so will your maker be married to you: and as a husband has joy in his bride, so will the Lord your God be glad over you.ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
6 I have put watchmen on your walls, O Jerusalem; they will not keep quiet day or night: you who are the Lord's recorders, take no rest,ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
7 And give him no rest, till he puts Jerusalem in her place to be praised in the earth.ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
8 The Lord has taken an oath by his right hand, and by the arm of his strength, Truly, I will no longer give your grain to be food for your haters; and men of strange countries will not take the wine for which your work has been done:ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
9 But those who have got in the grain will have it for their food, and will give praise to the Lord; and those who have got in the grapes will take the wine of them in the open places of my holy house.ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
10 Go through, go through the doors; make ready the way of the people; let the highway be lifted up; let the stones be taken away; let a flag be lifted up over the peoples.ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
11 The Lord has sent out word to the end of the earth, Say to the daughter of Zion, See, your saviour comes; those whom he has made free are with him, and those to whom he has given salvation go before him.ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.
12 And they will be named, The holy people, Those whose cause has been taken up by the Lord: and you will be named, Desired, A town not given up.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Kannada Bible