Isaiah 63 - DBY (Kannada)
1 Who is this that cometh from Edom, with deep-red garments from Bozrah, this that is glorious in his apparel, travelling in the greatness of his strength? -- I that speak in righteousness, mighty to save.ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
2 -- Wherefore is redness in thine apparel, and thy garments like him that treadeth in the winevat?ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
3 I have trodden the winepress alone, and of the peoples not a man was with me; and I have trodden them in mine anger, and trampled them in my fury; and their blood is sprinkled upon my garments, and I have stained all mine apparel.ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
4 For the day of vengeance was in my heart, and the year of my redeemed had come.ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
5 And I looked, and there was none to help; and I wondered that there was none to uphold: and mine own arm brought salvation unto me; and my fury, it upheld me.ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
6 And I have trodden down the peoples in mine anger, and made them drunk in my fury; and their blood have I brought down to the earth.ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
7 I will record the loving-kindnesses of Jehovah, the praises of Jehovah, according to all that Jehovah hath bestowed upon us, and the great goodness toward the house of Israel which he hath bestowed upon them according to his mercies, and according to the multitude of his loving-kindnesses.ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
8 And he said, They are indeed my people, children that will not lie; and he became their Saviour.ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
9 In all their affliction he was afflicted, and the Angel of his presence saved them: in his love and in his pity he redeemed them; and he bore them and carried them all the days of old.ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
10 But they rebelled and grieved his holy Spirit: and he turned to be their enemy; himself, he fought against them.ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
11 But he remembered the days of old, Moses [and] his people: Where is he that brought them up out of the sea with the shepherds of his flock? Where is he that put his holy Spirit within him,ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
12 his glorious arm leading them by the right hand of Moses, dividing the waters before them, to make himself an everlasting name,ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
13 -- who led them through the depths, like a horse in the wilderness, [and] they stumbled not?ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
14 As cattle go down into the valley, the Spirit of Jehovah gave them rest; so didst thou lead thy people, to make thyself a glorious name.ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
15 Look down from the heavens, and behold from the habitation of thy holiness and of thy glory! Where is thy zeal and thy strength, the sounding of thy bowels and of thy tender mercies? Are they restrained toward me?ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
16 For thou art our Father, though Abraham be ignorant of us, and Israel acknowledge us not: thou, Jehovah, art our Father; our Redeemer, from everlasting, is thy name.ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
17 Why, O Jehovah, hast thou made us to err from thy ways, hast hardened our heart from thy fear? Return for thy servants' sake, the tribes of thine inheritance.ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
18 Thy holy people have possessed [it] but a little while: our adversaries have trodden down thy sanctuary.ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.
19 We have become [like those] over whom thou never barest rule, those not called by thy name.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Kannada Bible