Bible

Isaiah 64 - YLT (Kannada)

1 Didst Thou not rend the heavens? Thou didst come down, From thy presence did mountains flow,ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,

2 (As fire kindleth stubble -- Fire causeth water to boil,) To make known Thy name to Thine adversaries, From Thy presence do nations tremble.ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!

3 In Thy doing fearful things -- we expect not, Thou didst come down, From Thy presence did mountains flow.ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.

4 Even from antiquity `men' have not heard, They have not given ear, Eye hath not seen a God save Thee, He doth work for those waiting for Him.ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.

5 Thou hast met with the rejoicer And the doer of righteousness, In Thy ways they remember Thee, Lo, Thou hast been wroth when we sin, By them `is' continuance, and we are saved.ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.

6 And we are as unclean -- all of us, And as a garment passing away, all our righteous acts; And we fade as a leaf -- all of us. And our iniquities as wind do take us away.ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.

7 And there is none calling in Thy name, Stirring up himself to lay hold on Thee, For Thou hast hid Thy face from us, And thou meltest us away by our iniquities.ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.

8 And now, O Jehovah, thou `art' our Father, We `are' the clay, and Thou our Framer, And the work of Thy hand -- all of us.ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

9 Be not wroth, O Jehovah, very sore, Nor for ever remember iniquity, Lo, look attentively, we beseech Thee, Thy people `are' we all.ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

10 Thy holy cities have been a wilderness, Zion a wilderness hath been, Jerusalem a desolation.ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.

11 Our holy and our beautiful house, Where praise Thee did our fathers, Hath become burnt with fire, And all our desirable things have become a waste.ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.

12 For these dost Thou refrain Thyself, Jehovah? Thou art silent, and dost afflict us very sore!'ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?

Kannada Bible