Isaiah 66 - DBY (Kannada)
1 Thus saith Jehovah: The heavens are my throne, and the earth is my footstool: what is the house that ye will build unto me? and what is the place of my rest?ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
2 Even all these things hath my hand made, and all these things have been, saith Jehovah. But to this man will I look: to the afflicted and contrite in spirit, and who trembleth at my word.ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
3 He that slaughtereth an ox, smiteth a man; he that sacrificeth a lamb, breaketh a dog's neck; he that offereth an oblation, [it is as] swine's blood; he that presenteth a memorial of incense, [is as] he that blesseth an idol. As they have chosen their own ways, and their soul delighteth in their abominations,ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
4 I also will choose their calamities, and will bring their fears upon them; because I called, and none answered, I spoke, and they did not hear, but did that which was evil in mine eyes, and chose that wherein I delight not.ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
5 Hear the word of Jehovah, ye that tremble at his word: Your brethren that hated you, that cast you out for my name's sake, said, Let Jehovah be glorified, and let us see your joy! but they shall be ashamed.ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
6 A voice of tumult from the city, a voice from the temple, a voice of Jehovah that rendereth recompence to his enemies!ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
7 Before she travailed, she brought forth; before her pain came, she was delivered of a man-child.ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
8 Who hath heard such a thing? who hath seen such things? Can a land be made to bring forth in one day? shall a nation be born at once? For as soon as Zion travailed, she brought forth her sons.ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
9 Shall I bring to the birth, and not cause to bring forth? saith Jehovah; I who cause to bring forth, shall I shut [the womb]? saith thy God.ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
10 Rejoice with Jerusalem, and be glad for her, all ye that love her; rejoice for joy with her, all ye that mourn over her:ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
11 because ye shall suck, and be satisfied with the breasts of her consolations; because ye shall drink out, and be delighted with the abundance of her glory.ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
12 For thus saith Jehovah: Behold, I will extend peace to her like a river, and the glory of the nations like an overflowing torrent; and ye shall suck, ye shall be carried upon the side, and be dandled upon the knees.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
13 As one whom his mother comforteth, so will I comfort you; and ye shall be comforted in Jerusalem.ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
14 And ye shall see [this], and your heart shall rejoice, and your bones shall flourish like the grass; and the hand of Jehovah shall be known toward his servants, and he will have indignation toward his enemies.ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
15 For behold, Jehovah will come with fire, and his chariots like a whirlwind, to render his anger with fury, and his rebuke with flames of fire.ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
16 For by fire and by his sword will Jehovah enter into judgment with all flesh: and the slain of Jehovah shall be many.ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
17 They that sanctify themselves, and purify themselves in the gardens behind one in the midst; that eat swine's flesh, and the abomination, and the mouse, shall perish together, saith Jehovah.ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
18 And I, -- their works and their thoughts [are before me]. ... [The time] cometh for the gathering of all nations and tongues; and they shall come, and see my glory.ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
19 And I will set a sign among them, and I will send those that escape of them unto the nations, to Tarshish, Pul, and Lud, that draw the bow; to Tubal and Javan, to the isles afar off, that have not heard my fame, neither have seen my glory: and they shall declare my glory among the nations.ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
20 And they shall bring all your brethren out of all the nations as an oblation unto Jehovah, upon horses, and in chariots, and in covered waggons, and upon mules, and upon dromedaries, to my holy mountain, to Jerusalem, saith Jehovah, as the children of Israel bring an oblation in a clean vessel into the house of Jehovah.ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
21 And I will also take of them for priests [and] for Levites, saith Jehovah.ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
22 For as the new heavens and the new earth which I will make shall remain before me, saith Jehovah, so shall your seed and your name remain.ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
23 And it shall come to pass from new moon to new moon, and from sabbath to sabbath, all flesh shall come to worship before me, saith Jehovah.ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.
24 And they shall go forth, and look upon the carcases of the men that have transgressed against me: for their worm shall not die, neither shall their fire be quenched; and they shall be an abhorrence unto all flesh.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
Kannada Bible