Jeremiah 13 - ASV (Kannada)
1 Thus saith Jehovah unto me, Go, and buy thee a linen girdle, and put it upon thy loins, and put it not in water.1 ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
2 So I bought a girdle according to the word of Jehovah, and put it upon my loins.ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
3 And the word of Jehovah came unto me the second time, saying,ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
4 Take the girdle that thou hast bought, which is upon thy loins, and arise, go to the Euphrates, and hide it there in a cleft of the rock.ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್‌ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
5 So I went, and hid it by the Euphrates, as Jehovah commanded me.ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
6 And it came to pass after many days, that Jehovah said unto me, Arise, go to the Euphrates, and take the girdle from thence, which I commanded thee to hide there.ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
7 Then I went to the Euphrates, and digged, and took the girdle from the place where I had hid it; and, behold, the girdle was marred, it was profitable for nothing.ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
8 Then the word of Jehovah came unto me, saying,ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
9 Thus saith Jehovah, After this manner will I mar the pride of Judah, and the great pride of Jerusalem.ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
10 This evil people, that refuse to hear my words, that walk in the stubbornness of their heart, and are gone after other gods to serve them, and to worship them, shall even be as this girdle, which is profitable for nothing.ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
11 For as the girdle cleaveth to the loins of a man, so have I caused to cleave unto me the whole house of Israel and the whole house of Judah, saith Jehovah; that they may be unto me for a people, and for a name, and for a praise, and for a glory: but they would not hear.ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
12 Therefore thou shalt speak unto them this word: Thus saith Jehovah, the God of Israel, Every bottle shall be filled with wine: and they shall say unto thee, Do we not certainly know that every bottle shall be filled with wine?ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
13 Then shalt thou say unto them, Thus saith Jehovah, Behold, I will fill all the inhabitants of this land, even the kings that sit upon David's throne, and the priests, and the prophets, and all the inhabitants of Jerusalem, with drunkenness.ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
14 And I will dash them one against another, even the fathers and the sons together, saith Jehovah: I will not pity, nor spare, nor have compassion, that I should not destroy them.ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
15 Hear ye, and give ear; be not proud; for Jehovah hath spoken.ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
16 Give glory to Jehovah your God, before he cause darkness, and before your feet stumble upon the dark mountains, and, while ye look for light, he turn it into the shadow of death, and make it gross darkness.ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
17 But if ye will not hear it, my soul shall weep in secret for `your' pride; and mine eye shall weep sore, and run down with tears, because Jehovah's flock is taken captive.ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
18 Say thou unto the king and to the queen-mother, Humble yourselves, sit down; for your headtires are come down, even the crown of your glory.ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
19 The cities of the South are shut up, and there is none to open them: Judah is carried away captive, all of it; it is wholly carried away captive.ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
20 Lift up your eyes, and behold them that come from the north: where is the flock that was given thee, thy beautiful flock?ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
21 What wilt thou say, when he shall set over thee as head those whom thou hast thyself taught to be friends to thee? shall not sorrows take hold of thee, as of a woman in travail?ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
22 And if thou say in thy heart, Wherefore are these things come upon me? for the greatness of thine iniquity are thy skirts uncovered, and thy heels suffer violence.ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
23 Can the Ethiopian change his skin, or the leopard his spots? then may ye also do good, that are accustomed to do evil.ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
24 Therefore will I scatter them, as the stubble that passeth away, by the wind of the wilderness.ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
25 This is thy lot, the portion measured unto thee from me, saith Jehovah; because thou hast forgotten me, and trusted in falsehood.ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
26 Therefore will I also uncover thy skirts upon thy face, and thy shame shall appear.ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.
27 I have seen thine abominations, even thine adulteries, and thy neighings, the lewdness of thy whoredom, on the hills in the field. Woe unto thee, O Jerusalem! thou wilt not be made clean; how long shall it yet be?ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Kannada Bible