Jeremiah 30 - WEB (Kannada)
1 The word that came to Jeremiah from Yahweh, saying,ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
2 Thus speaks Yahweh, the God of Israel, saying, Write you all the words that I have spoken to you in a book.ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
3 For, behold, the days come, says Yahweh, that I will turn again the captivity of my people Israel and Judah, says Yahweh; and I will cause them to return to the land that I gave to their fathers, and they shall possess it.ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
4 These are the words that Yahweh spoke concerning Israel and concerning Judah.ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
5 For thus says Yahweh: We have heard a voice of trembling, of fear, and not of peace.ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
6 Ask now, and see whether a man does travail with child: why do I see every man with his hands on his loins, as a woman in travail, and all faces are turned into paleness?ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
7 Alas! for that day is great, so that none is like it: it is even the time of Jacob's trouble; but he shall be saved out of it.ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
8 It shall come to pass in that day, says Yahweh of Hosts, that I will break his yoke from off your neck, and will burst your bonds; and strangers shall no more make him their bondservant;ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
9 but they shall serve Yahweh their God, and David their king, whom I will raise up to them.ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
10 Therefore don't you be afraid, O Jacob my servant, says Yahweh; neither be dismayed, Israel: for, behold, I will save you from afar, and your seed from the land of their captivity; and Jacob shall return, and shall be quiet and at ease, and none shall make him afraid.ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
11 For I am with you, says Yahweh, to save you: for I will make a full end of all the nations where I have scattered you, but I will not make a full end of you; but I will correct you in measure, and will in no way leave you unpunished.ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
12 For thus says Yahweh, Your hurt is incurable, and your wound grievous.ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
13 There is none to plead your cause, that you may be bound up: you have no healing medicines.ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
14 All your lovers have forgotten you; they don't seek you: for I have wounded you with the wound of an enemy, with the chastisement of a cruel one, for the greatness of your iniquity, because your sins were increased.ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
15 Why cry you for your hurt? your pain is incurable: for the greatness of your iniquity, because your sins were increased, I have done these things to you.ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
16 Therefore all those who devour you shall be devoured; and all your adversaries, everyone of them, shall go into captivity; and those who despoil you shall be a spoil, and all who prey on you will I give for a prey.ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
17 For I will restore health to you, and I will heal you of your wounds, says Yahweh; because they have called you an outcast, [saying], It is Zion, whom no man seeks after.ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
18 Thus says Yahweh: Behold, I will turn again the captivity of Jacob's tents, and have compassion on his dwelling-places; and the city shall be built on its own hill, and the palace shall be inhabited after its own manner.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
19 Out of them shall proceed thanksgiving and the voice of those who make merry: and I will multiply them, and they shall not be few; I will also glorify them, and they shall not be small.ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
20 Their children also shall be as before, and their congregation shall be established before me; and I will punish all who oppress them.ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
21 Their prince shall be of themselves, and their ruler shall proceed from the midst of them; and I will cause him to draw near, and he shall approach to me: for who is he who has had boldness to approach to me? says Yahweh.ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
22 You shall be my people, and I will be your God.ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
23 Behold, the tempest of Yahweh, [even his] wrath, is gone forth, a sweeping tempest: it shall burst on the head of the wicked.ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.
24 The fierce anger of Yahweh shall not return, until he has executed, and until he have performed the intents of his heart: in the latter days you shall understand it.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Kannada Bible