Jeremiah 50:41
ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
Jeremiah 50:41 in Other Translations
King James Version (KJV)
Behold, a people shall come from the north, and a great nation, and many kings shall be raised up from the coasts of the earth.
American Standard Version (ASV)
Behold, a people cometh from the north; and a great nation and many kings shall be stirred up from the uttermost parts of the earth.
Bible in Basic English (BBE)
See, a people is coming from the north; a great nation and a number of kings will be put in motion from the inmost parts of the earth.
Darby English Bible (DBY)
Behold, a people cometh from the north, and a great nation. And many kings shall arise from the uttermost parts of the earth.
World English Bible (WEB)
Behold, a people comes from the north; and a great nation and many kings shall be stirred up from the uttermost parts of the earth.
Young's Literal Translation (YLT)
Lo, a people hath come from the north, Even a great nation, And many kings are stirred up from the sides of the earth.
| Behold, | הִנֵּ֛ה | hinnē | hee-NAY |
| a people | עַ֥ם | ʿam | am |
| shall come | בָּ֖א | bāʾ | ba |
| north, the from | מִצָּפ֑וֹן | miṣṣāpôn | mee-tsa-FONE |
| and a great | וְג֤וֹי | wĕgôy | veh-ɡOY |
| nation, | גָּדוֹל֙ | gādôl | ɡa-DOLE |
| many and | וּמְלָכִ֣ים | ûmĕlākîm | oo-meh-la-HEEM |
| kings | רַבִּ֔ים | rabbîm | ra-BEEM |
| shall be raised up | יֵעֹ֖רוּ | yēʿōrû | yay-OH-roo |
| coasts the from | מִיַּרְכְּתֵי | miyyarkĕtê | mee-yahr-keh-TAY |
| of the earth. | אָֽרֶץ׃ | ʾāreṣ | AH-rets |
Cross Reference
Jeremiah 51:27
ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
Jeremiah 50:9
ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
Jeremiah 6:22
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
Isaiah 13:2
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
Revelation 17:16
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
Jeremiah 51:11
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
Jeremiah 51:1
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
Jeremiah 50:2
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
Jeremiah 25:14
ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
Isaiah 13:17
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.