Bible

Job 24 - BBE (Kannada)

1 Why are times not stored up by the Ruler of all, and why do those who have knowledge of him not see his days?ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?

2 The landmarks are changed by evil men, they violently take away flocks, together with their keepers.ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.

3 They send away the ass of him who has no father, they take the widow's ox for debt.ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.

4 The crushed are turned out of the way; all the poor of the earth go into a secret place together.ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.

5 Like asses in the waste land they go out to their work, looking for food with care; from the waste land they get bread for their children.ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.

6 They get mixed grain from the field, and they take away the late fruit from the vines of those who have wealth.ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.

7 They take their rest at night without clothing, and have no cover in the cold.ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.

8 They are wet with the rain of the mountains, and get into the cracks of the rock for cover.ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.

9 The child without a father is forced from its mother's breast, and they take the young children of the poor for debt.ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.

10 Others go about without clothing, and though they have no food, they get in the grain from the fields.ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ

11 Between the lines of olive-trees they make oil; though they have no drink, they are crushing out the grapes.ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.

12 From the town come sounds of pain from those who are near death, and the soul of the wounded is crying out for help; but God does not take note of their prayer.ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.

13 Then there are those who are haters of the light, who have no knowledge of its ways, and do not go in them.ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.

14 He who is purposing death gets up before day, so that he may put to death the poor and those in need.ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.

15 And the man whose desire is for the wife of another is waiting for the evening, saying, No eye will see me; and he puts a cover on his face. And in the night the thief goes about;ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.

16 In the dark he makes holes in the walls of houses: in the daytime they are shutting themselves up, they have no knowledge of the light.ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.

17 For the middle of the night is as morning to them, they are not troubled by the fear of the dark.ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.

18 They go quickly on the face of the waters; their heritage is cursed in the earth; the steps of the crusher of grapes are not turned to their vine-garden.ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.

19 Snow waters become dry with the heat: so do sinners go down into the underworld.ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.

20 The public place of his town has no more knowledge of him, and his name has gone from the memory of men: he is rooted up like a dead tree.ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.

21 He is not kind to the widow, and he has no pity for her child.ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.

22 But God by his power gives long life to the strong; he gets up again, though he has no hope of life.ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.

23 He takes away his fear of danger and gives him support; and his eyes are on his ways.ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.

24 For a short time they are lifted up; then they are gone; they are made low, they are pulled off like fruit, and like the heads of grain they are cut off.ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.

25 And if it is not so, now, who will make it clear that my words are false, and that what I say is of no value?ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?

Kannada Bible