Joel 1 - ASV (Kannada)
1 The word of Jehovah that came to Joel the son of Pethuel.ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು.
2 Hear this, ye old men, and give ear, all ye inhabitants of the land. Hath this been in your days, or in the days of your fathers?ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
3 Tell ye your children of it, and `let' your children `tell' their children, and their children another generation.ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
4 That which the palmer-worm hath left hath the locust eaten; and that which the locust hath left hath the canker-worm eaten; and that which the canker-worm hath left hath the caterpillar eaten.ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
5 Awake, ye drunkards, and weep; and wail, all ye drinkers of wine, because of the sweet wine; for it is cut off from your mouth.ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
6 For a nation is come up upon my land, strong, and without number; his teeth are the teeth of a lion, and he hath the jaw-teeth of a lioness.ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
7 He hath laid my vine waste, and barked my fig-tree: he hath made it clean bare, and cast it away; the branches thereof are made white.ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
8 Lament like a virgin girded with sackcloth for the husband of her youth.ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
9 The meal-offering and the drink-offering are cut off from the house of Jehovah; the priests, Jehovah's ministers, mourn.ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
10 The field is laid waste, the land mourneth; for the grain is destroyed, the new wine is dried up, the oil languisheth.ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
11 Be confounded, O ye husbandmen, wail, O ye vinedressers, for the wheat and for the barley; for the harvest of the field is perished.ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
12 The vine is withered, and the fig-tree languisheth; the pomegranate-tree, the palm-tree also, and the apple-tree, even all the trees of the field are withered: for joy is withered away from the sons of men.ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
13 Gird yourselves `with sackcloth', and lament, ye priests; wail, ye ministers of the altar; come, lie all night in sackcloth, ye ministers of my God: for the meal-offering and the drink-offering are withholden from the house of your God.ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
14 Sanctify a fast, call a solemn assembly, gather the old men `and' all the inhabitants of the land unto the house of Jehovah your God, and cry unto Jehovah.ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
15 Alas for the day! for the day of Jehovah is at hand, and as destruction from the Almighty shall it come.ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
16 Is not the food cut off before our eyes, `yea', joy and gladness from the house of our God?ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
17 The seeds rot under their clods; the garners are laid desolate, the barns are broken down; for the grain is withered.ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
18 How do the beasts groan! the herds of cattle are perplexed, because they have no pasture; yea, the flocks of sheep are made desolate.ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
19 O Jehovah, to thee do I cry; for the fire hath devoured the pastures of the wilderness, and the flame hath burned all the trees of the field.ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.
20 Yea, the beasts of the field pant unto thee; for the water brooks are dried up, and the fire hath devoured the pastures of the wilderness.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
Kannada Bible