John 16 - KJV (Kannada)
1 These things have I spoken unto you, that ye should not be offended.ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
2 They shall put you out of the synagogues: yea, the time cometh, that whosoever killeth you will think that he doeth God service.ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
3 And these things will they do unto you, because they have not known the Father, nor me.ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
4 But these things have I told you, that when the time shall come, ye may remember that I told you of them. And these things I said not unto you at the beginning, because I was with you.ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
5 But now I go my way to him that sent me; and none of you asketh me, Whither goest thou?ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
6 But because I have said these things unto you, sorrow hath filled your heart.ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
7 Nevertheless I tell you the truth; It is expedient for you that I go away: for if I go not away, the Comforter will not come unto you; but if I depart, I will send him unto you.ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
8 And when he is come, he will reprove the world of sin, and of righteousness, and of judgment:ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
9 Of sin, because they believe not on me;ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
10 Of righteousness, because I go to my Father, and ye see me no more;ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
11 Of judgment, because the prince of this world is judged.ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
12 I have yet many things to say unto you, but ye cannot bear them now.ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
13 Howbeit when he, the Spirit of truth, is come, he will guide you into all truth: for he shall not speak of himself; but whatsoever he shall hear, that shall he speak: and he will shew you things to come.ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
14 He shall glorify me: for he shall receive of mine, and shall shew it unto you.ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
15 All things that the Father hath are mine: therefore said I, that he shall take of mine, and shall shew it unto you.ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
16 A little while, and ye shall not see me: and again, a little while, and ye shall see me, because I go to the Father.ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
17 Then said some of his disciples among themselves, What is this that he saith unto us, A little while, and ye shall not see me: and again, a little while, and ye shall see me: and, Because I go to the Father?ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
18 They said therefore, What is this that he saith, A little while? we cannot tell what he saith.ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
19 Now Jesus knew that they were desirous to ask him, and said unto them, Do ye enquire among yourselves of that I said, A little while, and ye shall not see me: and again, a little while, and ye shall see me?ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
20 Verily, verily, I say unto you, That ye shall weep and lament, but the world shall rejoice: and ye shall be sorrowful, but your sorrow shall be turned into joy.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
21 A woman when she is in travail hath sorrow, because her hour is come: but as soon as she is delivered of the child, she remembereth no more the anguish, for joy that a man is born into the world.ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
22 And ye now therefore have sorrow: but I will see you again, and your heart shall rejoice, and your joy no man taketh from you.ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
23 And in that day ye shall ask me nothing. Verily, verily, I say unto you, Whatsoever ye shall ask the Father in my name, he will give it you.ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
24 Hitherto have ye asked nothing in my name: ask, and ye shall receive, that your joy may be full.ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
25 These things have I spoken unto you in proverbs: but the time cometh, when I shall no more speak unto you in proverbs, but I shall shew you plainly of the Father.ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
26 At that day ye shall ask in my name: and I say not unto you, that I will pray the Father for you:ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
27 For the Father himself loveth you, because ye have loved me, and have believed that I came out from God.ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28 I came forth from the Father, and am come into the world: again, I leave the world, and go to the Father.ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
29 His disciples said unto him, Lo, now speakest thou plainly, and speakest no proverb.ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
30 Now are we sure that thou knowest all things, and needest not that any man should ask thee: by this we believe that thou camest forth from God.ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
31 Jesus answered them, Do ye now believe?ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
32 Behold, the hour cometh, yea, is now come, that ye shall be scattered, every man to his own, and shall leave me alone: and yet I am not alone, because the Father is with me.ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.
33 These things I have spoken unto you, that in me ye might have peace. In the world ye shall have tribulation: but be of good cheer; I have overcome the world.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Kannada Bible