Bible

John 3 - DBY (Kannada)

1 But there was a man from among the Pharisees, his name Nicodemus, a ruler of the Jews;ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.

2 he came to him by night, and said to him, Rabbi, we know that thou art come a teacher from God, for none can do these signs that thou doest unless God be with him.ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

3 Jesus answered and said to him, Verily, verily, I say unto thee, Except any one be born anew he cannot see the kingdom of God.ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

4 Nicodemus says to him, How can a man be born being old? can he enter a second time into the womb of his mother and be born?ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

5 Jesus answered, Verily, verily, I say unto thee, Except any one be born of water and of Spirit, he cannot enter into the kingdom of God.ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

6 That which is born of the flesh is flesh; and that which is born of the Spirit is spirit.ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.

7 Do not wonder that I said to thee, It is needful that *ye* should be born anew.ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

8 The wind blows where it will, and thou hearest its voice, but knowest not whence it comes and where it goes: thus is every one that is born of the Spirit.ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.

9 Nicodemus answered and said to him, How can these things be?ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ

10 Jesus answered and said to him, Thou art the teacher of Israel and knowest not these things!ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?

11 Verily, verily, I say unto thee, We speak that which we know, and we bear witness of that which we have seen, and ye receive not our witness.ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.

12 If I have said the earthly things to you, and ye believe not, how, if I say the heavenly things to you, will ye believe?ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?

13 And no one has gone up into heaven, save he who came down out of heaven, the Son of man who is in heaven.ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.

14 And as Moses lifted up the serpent in the wilderness, thus must the Son of man be lifted up,ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

15 that every one who believes on him may [not perish, but] have life eternal.ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

16 For God so loved the world, that he gave his only-begotten Son, that whosoever believes on him may not perish, but have life eternal.ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.

17 For God has not sent his Son into the world that he may judge the world, but that the world may be saved through him.ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.

18 He that believes on him is not judged: but he that believes not has been already judged, because he has not believed on the name of the only-begotten Son of God.ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

19 And this is the judgment, that light is come into the world, and men have loved darkness rather than light; for their works were evil.ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

20 For every one that does evil hates the light, and does not come to the light that his works may not be shewn as they are;ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.

21 but he that practises the truth comes to the light, that his works may be manifested that they have been wrought in God.ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.

22 After these things came Jesus and his disciples into the land of Judaea; and there he abode with them and baptised.ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.

23 And John also was baptising in Aenon, near Salim, because there was a great deal of water there; and they came to [him] and were baptised:ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.

24 for John was not yet cast into prison.ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.

25 There was therefore a reasoning of the disciples of John with a Jew about purification.ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

26 And they came to John and said to him, Rabbi, he who was with thee beyond the Jordan, to whom thou barest witness, behold, he baptises, and all come to him.ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.

27 John answered and said, A man can receive nothing unless it be given him out of heaven.ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.

28 Ye yourselves bear me witness that I said, I am not the Christ, but, that I am sent before him.ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.

29 He that has the bride is the bridegroom; but the friend of the bridegroom, who stands and hears him, rejoices in heart because of the voice of the bridegroom: this my joy then is fulfilled.ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.

30 He must increase, but I must decrease.ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.

31 He who comes from above is above all. He who has his origin in the earth is of the earth, and speaks [as] of the earth. He who comes out of heaven is above all,ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.

32 [and] what he has seen and has heard, this he testifies; and no one receives his testimony.ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.

33 He that has received his testimony has set to his seal that God is true;ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.

34 for he whom God has sent speaks the words of God, for God gives not the Spirit by measure.ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.

35 The Father loves the Son, and has given all things [to be] in his hand.ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.

36 He that believes on the Son has life eternal, and he that is not subject to the Son shall not see life, but the wrath of God abides upon him.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

Kannada Bible