John 6 - DBY (Kannada)
1 After these things Jesus went away beyond the sea of Galilee, [or] of Tiberias,ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
2 and a great crowd followed him, because they saw the signs which he wrought upon the sick.ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
3 And Jesus went up into the mountain, and there sat with his disciples:ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
4 but the passover, the feast of the Jews, was near.ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
5 Jesus then, lifting up his eyes and seeing that a great crowd is coming to him, says to Philip, Whence shall we buy loaves that these may eat?ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
6 But this he said trying him, for he knew what he was going to do.ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
7 Philip answered him, Loaves for two hundred denarii are not sufficient for them, that each may have some little [portion].ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
8 One of his disciples, Andrew, Simon Peter's brother, says to him,ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
9 There is a little boy here who has five barley loaves and two small fishes; but this, what is it for so many?ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
10 [And] Jesus said, Make the men sit down. Now there was much grass in the place: the men therefore sat down, in number about five thousand.ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
11 And Jesus took the loaves, and having given thanks, distributed [them] to those that were set down; and in like manner of the small fishes as much as they would.ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
12 And when they had been filled, he says to his disciples, Gather together the fragments which are over and above, that nothing may be lost.ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
13 They gathered [them] therefore together, and filled twelve hand-baskets full of fragments of the five barley loaves, which were over and above to those that had eaten.ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
14 The men therefore, having seen the sign which Jesus had done, said, This is truly the prophet which is coming into the world.ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
15 Jesus therefore knowing that they were going to come and seize him, that they might make [him] king, departed again to the mountain himself alone.ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
16 But when evening was come, his disciples went down to the sea,ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
17 and having gone on board ship, they went over the sea to Capernaum. And it had already become dark, and Jesus had not come to them,ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
18 and the sea was agitated by a strong wind blowing.ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
19 Having rowed then about twenty-five or thirty stadia, they see Jesus walking on the sea and coming near the ship; and they were frightened.ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
20 But he says to them, It is I: be not afraid.ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
21 They were willing therefore to receive him into the ship; and immediately the ship was at the land to which they went.ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
22 On the morrow the crowd which stood on the other side of the sea, having seen that there was no other little ship there except that into which his disciples had got, and that Jesus had not gone with his disciples into the ship, but [that] his disciples had gone away alone;ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
23 (but other little ships out of Tiberias came near to the place where they ate bread after the Lord had given thanks;)(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
24 when therefore the crowd saw that Jesus was not there, nor his disciples, *they* got into the ships, and came to Capernaum, seeking Jesus.ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25 And having found him the other side of the sea, they said to him, Rabbi, when art thou arrived here?ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
26 Jesus answered them and said, Verily, verily, I say to you, Ye seek me not because ye have seen signs, but because ye have eaten of the loaves and been filled.ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
27 Work not [for] the food which perishes, but [for] the food which abides unto life eternal, which the Son of man shall give to you; for him has the Father sealed, [even] God.ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
28 They said therefore to him, What should we do that we may work the works of God?ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
29 Jesus answered and said to them, This is the work of God, that ye believe on him whom *he* has sent.ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
30 They said therefore to him, What sign then doest thou that we may see and believe thee? what dost thou work?ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
31 Our fathers ate the manna in the wilderness, as it is written, He gave them bread out of heaven to eat.ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
32 Jesus therefore said to them, Verily, verily, I say to you, [It is] not Moses that has given you the bread out of heaven; but my Father gives you the true bread out of heaven.ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
33 For the bread of God is he who comes down out of heaven and gives life to the world.ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
34 They said therefore to him, Lord, ever give to us this bread.ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
35 [And] Jesus said to them, I am the bread of life: he that comes to me shall never hunger, and he that believes on me shall never thirst at any time.ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
36 But I have said to you, that ye have also seen me and do not believe.ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
37 All that the Father gives me shall come to me, and him that comes to me I will not at all cast out.ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
38 For I am come down from heaven, not that I should do *my* will, but the will of him that has sent me.ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
39 And this is the will of him that has sent me, that of all that he has given me I should lose nothing, but should raise it up in the last day.ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
40 For this is the will of my Father, that every one who sees the Son, and believes on him, should have life eternal; and I will raise him up at the last day.ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
41 The Jews therefore murmured about him, because he said, I am the bread which has come down out of heaven.ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
42 And they said, Is not this Jesus the son of Joseph, whose father and mother we have known? how then does *he* say, I am come down out of heaven?ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
43 Jesus therefore answered and said to them, Murmur not among yourselves.ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
44 No one can come to me except the Father who has sent me draw him, and I will raise him up in the last day.ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
45 It is written in the prophets, And they shall be all taught of God. Every one that has heard from the Father [himself], and has learned [of him], comes to me;ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
46 not that any one has seen the Father, except he who is of God, he has seen the Father.ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
47 Verily, verily, I say to you, He that believes [on me] has life eternal.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
48 I am the bread of life.ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
49 Your fathers ate the manna in the wilderness and died.ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
50 This is the bread which comes down out of heaven, that one may eat of it and not die.ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
51 I am the living bread which has come down out of heaven: if any one shall have eaten of this bread he shall live for ever; but the bread withal which I shall give is my flesh, which I will give for the life of the world.ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
52 The Jews therefore contended among themselves, saying, How can he give us this flesh to eat?ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
53 Jesus therefore said to them, Verily, verily, I say unto you, Unless ye shall have eaten the flesh of the Son of man, and drunk his blood, ye have no life in yourselves.ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
54 He that eats my flesh and drinks my blood has life eternal, and I will raise him up at the last day:ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
55 for my flesh is truly food and my blood is truly drink.ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
56 He that eats my flesh and drinks my blood dwells in me and I in him.ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
57 As the living Father has sent me and I live on account of the Father, *he* also who eats me shall live also on account of me.ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
58 This is the bread which has come down out of heaven. Not as the fathers ate and died: he that eats this bread shall live for ever.ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
59 These things he said in [the] synagogue, teaching in Capernaum.ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
60 Many therefore of his disciples having heard [it] said, This word is hard; who can hear it?ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
61 But Jesus, knowing in himself that his disciples murmur concerning this, said to them, Does this offend you?ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
62 If then ye see the Son of man ascending up where he was before?ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
63 It is the Spirit which quickens, the flesh profits nothing: the words which I have spoken unto you are spirit and are life.ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
64 But there are some of you who do not believe. For Jesus knew from the beginning who they were who did not believe, and who would deliver him up.ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
65 And he said, Therefore said I unto you, that no one can come to me unless it be given to him from the Father.ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
66 From that [time] many of his disciples went away back and walked no more with him.ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
67 Jesus therefore said to the twelve, Will ye also go away?ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
68 Simon Peter answered him, Lord, to whom shall we go? thou hast words of life eternal;ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
69 and we have believed and known that thou art the holy one of God.ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
70 Jesus answered them, Have not I chosen you the twelve? and of you one is a devil.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
71 Now he spoke of Judas [the son] of Simon, Iscariote, for he [it was who] should deliver him up, being one of the twelve.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Kannada Bible