Bible

Jonah 1 - BBE (Kannada)

1 And the word of the Lord came to Jonah, the son of Amittai, saying,ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.

2 Up! go to Nineveh, that great town, and let your voice come to it; for their evil-doing has come up before me.ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.

3 And Jonah got up to go in flight to Tarshish, away from the Lord; and he went down to Joppa, and saw there a ship going to Tarshish: so he gave them the price of the journey and went down into it to go with them to Tarshish, away from the Lord.ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.

4 And the Lord sent out a great wind on to the sea and there was a violent storm in the sea, so that the ship seemed in danger of being broken.ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.

5 Then the sailors were full of fear, every man crying to his god; and the goods in the ship were dropped out into the sea to make the weight less. But Jonah had gone down into the inmost part of the ship where he was stretched out in a deep sleep.ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.

6 And the ship's captain came to him and said to him, What are you doing sleeping? Up! say a prayer to your God, if by chance God will give a thought to us, so that we may not come to destruction.ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.

7 And they said to one another, Come, let us put this to the decision of chance and see on whose account this evil has come on us. So they did so, and Jonah was seen to be the man.ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.

8 Then they said to him, Now make clear to us what is your work, and where you come from? what is your country, and who are your people?ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,

9 And he said to them, I am a Hebrew, a worshipper of the Lord, the God of heaven, who made the sea and the dry land.ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.

10 And the men were in great fear, and they said to him, What is this you have done? For the men had knowledge of his flight from the Lord because he had not kept it from them.ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.

11 And they said to him, What are we to do to you so that the sea may become calm for us? For the sea was getting rougher and rougher.ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.

12 And he said to them, Take me up and put me into the sea, and the sea will become calm for you: for I am certain that because of me this great storm has come on you.ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.

13 And the men were working hard to get back to the land, but they were not able to do so: for the sea got rougher and rougher against them.ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.

14 So, crying to the Lord, they said, Give ear to our prayer, O Lord, give ear, and do not let destruction overtake us because of this man's life; do not put on us the sin of taking life without cause: for you, O Lord, have done what seemed good to you.ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

15 So they took Jonah up and put him into the sea: and the sea was no longer angry.ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.

16 Then great was the men's fear of the Lord; and they made an offering to the Lord and took oaths to him.ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.

Kannada Bible