Bible

Jonah 2 - ASV (Kannada)

1 Then Jonah prayed unto Jehovah his God out of the fish's belly.ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

2 And he said, I called by reason of mine affliction unto Jehovah, And he answered me; Out of the belly of Sheol cried I, `And' thou heardest my voice.ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.

3 For thou didst cast me into the depth, in the heart of the seas, And the flood was round about me; All thy waves and thy billows passed over me.ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

4 And I said, I am cast out from before thine eyes; Yet I will look again toward thy holy temple.ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.

5 The waters compassed me about, even to the soul; The deep was round about me; The weeds were wrapped about my head.ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.

6 I went down to the bottoms of the mountains; The earth with its bars `closed' upon me for ever: Yet hast thou brought up my life from the pit, O Jehovah my God.ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.

7 When my soul fainted within me, I remembered Jehovah; And my prayer came in unto thee, into thy holy temple.ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.

8 They that regard lying vanities Forsake their own mercy.ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

9 But I will sacrifice unto thee with the voice of thanksgiving; I will pay that which I have vowed. Salvation is of Jehovah.ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.

10 And Jehovah spake unto the fish, and it vomited out Jonah upon the dry land.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.

Kannada Bible