Bible

Jonah 2 - YLT (Kannada)

1 And Jonah prayeth unto Jehovah his God from the bowels of the fish.ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

2 And he saith: I called, because of my distress, to Jehovah, And He doth answer me, From the belly of sheol I have cried, Thou hast heard my voice.ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.

3 When Thou dost cast me `into' the deep, Into the heart of the seas, Then the flood doth compass me, All Thy breakers and Thy billows have passed over me.ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

4 And I -- I said: I have been cast out from before Thine eyes, (Yet I add to look unto Thy holy temple!)ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.

5 Compassed me have waters unto the soul, The deep doth compass me, The weed is bound to my head.ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.

6 To the cuttings of mountains I have come down, The earth, her bars `are' behind me to the age. And Thou bringest up from the pit my life, O Jehovah my God.ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.

7 In the feebleness within me of my soul Jehovah I have remembered, And come in unto Thee doth my prayer, Unto Thy holy temple.ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.

8 Those observing lying vanities their own mercy forsake.ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

9 And I -- with a voice of thanksgiving -- I sacrifice to Thee, That which I have vowed I complete, Salvation `is' of Jehovah.ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.

10 And Jehovah saith to the fish, and it vomiteth out Jonah on the dry land.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.

Kannada Bible