Jude 1 - BBE (Kannada)
1 Jude, a servant of Jesus Christ and the brother of James, to those of God's selection who have been made holy by God the Father and are kept safe for Jesus Christ:ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
2 May mercy and peace and love be increased in you.ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
3 My loved ones, while my thoughts were full of a letter which I was going to send you about our common salvation, it was necessary for me to send you one requesting you with all my heart to go on fighting strongly for the faith which has been given to the saints once and for ever.ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
4 For certain men have come among you secretly, marked out before in the holy Writings for this evil fate, men without the fear of God, turning his grace into an unclean thing, and false to our only Master and Lord, Jesus Christ.ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
5 Now it is my purpose to put you in mind, though you once had knowledge of all these things, of how the Lord, having taken a people safely out of Egypt, later sent destruction on those who had no faith;ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
6 And the angels who did not keep to their kingdom but went out from the place which was theirs, he has put in eternal chains and in dark night till the great day of the judging.ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
7 Even as Sodom and Gomorrah, and the towns near them, having like these, given themselves up to unclean desires and gone after strange flesh, have been made an example, undergoing the punishment of eternal fire.ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
8 In the same way these dreamers make the flesh unclean, having no respect for authorities, and say evil of rulers.ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
9 Now when Michael, one of the chief angels, was fighting against the Evil One for the body of Moses, fearing to make use of violent words against him, he only said, May the Lord be your judge.ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
10 But these men say evil about such things as they have no knowledge of; and the things of which they have natural knowledge, like beasts without reason, are the cause of their destruction.ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11 A curse on them! They have gone in the way of Cain, running uncontrolled into the error of Balaam for reward, and have come to destruction by saying evil against the Lord, like Korah.ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
12 These men are unseen rocks at your love-feasts, when they take part in them with you, keepers of sheep who without fear take the food of the sheep; clouds without water rushing before the wind, wasted trees without fruit, twice dead, pulled up by the roots,ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
13 Violent waves of the sea, streaming with their shame, wandering stars for whom the darkest night is kept in store for ever.ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
14 The prophet Enoch, who was the seventh after Adam, said of these men, The Lord came with tens of thousands of his saints,ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
15 To be the judge of all, and to give a decision against all those whose lives are unpleasing to him, because of the evil acts which they have done, and because of all the hard things which sinners without fear of God have said against him.ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
16 These are the men who make trouble, ever desiring change, going after evil pleasures, using high-sounding words, respecting men's position in the hope of reward.ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
17 But you, my loved ones, keep in memory the words which were said before by the Apostles of our Lord Jesus Christ,ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18 How they said to you, In the last days there will be men who, guided by their evil desires, will make sport of holy things.ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
19 These are the men who make divisions, natural men, not having the Spirit.ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
20 But you, my loved ones, building yourselves up on your most holy faith, and making prayers in the Holy Spirit,ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
21 Keep yourselves in the love of God, looking for life eternal through the mercy of our Lord Jesus Christ.ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22 And have pity on those who are in doubt;ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
23 And to some give salvation, pulling them out of the fire; and on some have mercy with fear, hating even the clothing which is made unclean by the flesh.ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
24 Now to him who is able to keep you from falling, and to give you a place in his glory, free from all evil, with great joy,ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ
25 To the only God our Saviour, through Jesus Christ our Lord, let us give glory and honour and authority and power, before all time and now and for ever. So be it.ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Kannada Bible