Bible

1 John 4 - BBE (Kannada)

1 My loved ones, do not put your faith in every spirit, but put them to the test, to see if they are from God: because a great number of false prophets have gone out into the world.ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

2 By this you may have knowledge of the Spirit of God: every spirit which says that Jesus Christ has come in the flesh is of God:ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.

3 And every spirit which does not say this is not from God: this is the spirit of Antichrist, of which you have had word; and it is in the world even now.ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.

4 You are of God, my little children, and you have overcome them because he who is in you is greater than he who is in the world.ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.

5 They are of the world, so their talk is the world's talk, and the world gives ear to them.ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

6 We are of God: he who has the knowledge of God gives ear to us; he who is not of God does not give ear to us. By this we may see which is the true spirit, and which is the spirit of error.ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.

7 My loved ones, let us have love for one another: because love is of God, and everyone who has love is a child of God and has knowledge of God.ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

8 He who has no love has no knowledge of God, because God is love.ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.

9 And the love of God was made clear to us when he sent his only Son into the world so that we might have life through him.ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.

10 And this is love, not that we had love for God, but that he had love for us, and sent his Son to be an offering for our sins.ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

11 My loved ones, if God had such love for us, it is right for us to have love for one another.ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

12 No man has ever seen God: if we have love for one another, God is in us and his love is made complete in us:ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.

13 And his Spirit which he has given us is the witness that we are in him and he is in us.ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.

14 And we have seen and give witness that the Father sent the Son to be the Saviour of the world.ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.

15 Everyone who says openly that Jesus is the Son of God, has God in him and is in God.ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

16 And we have seen and had faith in the love which God has for us. God is love, and everyone who has love is in God, and God is in him.ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

17 In this way love is made complete in us, so that we may be without fear on the day of judging, because as he is, so are we in this world.ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.

18 There is no fear in love: true love has no room for fear, because where fear is, there is pain; and he who is not free from fear is not complete in love.ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.

19 We have the power of loving, because he first had love for us.ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

20 If a man says, I have love for God, and has hate for his brother, his words are false: for how is the man who has no love for his brother whom he has seen, able to have love for God whom he has not seen?ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?

21 And this is the word which we have from him, that he who has love for God is to have the same love for his brother.ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.

Kannada Bible