Bible

2 Samuel 15 - WEB (Kannada)

1 It happened after this, that Absalom prepared him a chariot and horses, and fifty men to run before him.ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

2 Absalom rose up early, and stood beside the way of the gate: and it was so, that when any man had a suit which should come to the king for judgment, then Absalom called to him, and said, Of what city are you? He said, Your servant is of one of the tribes of Israel.ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

3 Absalom said to him, Behold, your matters are good and right; but there is no man deputized of the king to hear you.ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

4 Absalom said moreover, Oh that I were made judge in the land, that every man who has any suit or cause might come to me, and I would do him justice!ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

5 It was so, that when any man came near to do him obeisance, he put forth his hand, and took hold of him, and kissed him.ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

6 In this manner Absalom did to all Israel who came to the king for judgment: so Absalom stole the hearts of the men of Israel.ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

7 It happened at the end of forty years, that Absalom said to the king, please let me go and pay my vow, which I have vowed to Yahweh, in Hebron.ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.

8 For your servant vowed a vow while I abode at Geshur in Syria, saying, If Yahweh shall indeed bring me again to Jerusalem, then I will serve Yahweh.ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.

9 The king said to him, Go in peace. So he arose, and went to Hebron.ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.

10 But Absalom sent spies throughout all the tribes of Israel, saying, As soon as you hear the sound of the trumpet, then you shall say, Absalom is king in Hebron.ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.

11 With Absalom went two hundred men out of Jerusalem, who were invited, and went in their simplicity; and they didn't know anything.ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.

12 Absalom sent for Ahithophel the Gilonite, David's counselor, from his city, even from Giloh, while he was offering the sacrifices. The conspiracy was strong; for the people increased continually with Absalom.ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

13 There came a messenger to David, saying, The hearts of the men of Israel are after Absalom.ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.

14 David said to all his servants who were with him at Jerusalem, Arise, and let us flee; for else none of us shall escape from Absalom: make speed to depart, lest he overtake us quickly, and bring down evil on us, and strike the city with the edge of the sword.ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.

15 The king's servants said to the king, Behold, your servants are ready to do whatever my lord the king shall choose.ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.

16 The king went forth, and all his household after him. The king left ten women, who were concubines, to keep the house.ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

17 The king went forth, and all the people after him; and they stayed in Beth Merhak.ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.

18 All his servants passed on beside him; and all the Cherethites, and all the Pelethites, and all the Gittites, six hundred men who came after him from Gath, passed on before the king.ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

19 Then said the king to Ittai the Gittite, Why go you also with us? return, and abide with the king: for you are a foreigner, and also an exile; [return] to your own place.ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.

20 Whereas you came but yesterday, should I this day make you go up and down with us, seeing I go where I may? return you, and take back your brothers; mercy and truth be with you.ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.

21 Ittai answered the king, and said, As Yahweh lives, and as my lord the king lives, surely in what place my lord the king shall be, whether for death or for life, even there also will your servant be.ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.

22 David said to Ittai, Go and pass over. Ittai the Gittite passed over, and all his men, and all the little ones who were with him.ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.

23 All the country wept with a loud voice, and all the people passed over: the king also himself passed over the brook Kidron, and all the people passed over, toward the way of the wilderness.ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.

24 Behold, Zadok also [came], and all the Levites with him, bearing the ark of the covenant of God; and they set down the ark of God; and Abiathar went up, until all the people had done passing out of the city.ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.

25 The king said to Zadok, Carry back the ark of God into the city: if I shall find favor in the eyes of Yahweh, he will bring me again, and show me both it, and his habitation:ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

26 but if he say thus, I have no delight in you; behold, here am I, let him do to me as seems good to him.ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.

27 The king said also to Zadok the priest, "Aren't you a seer? Return into the city in peace, and your two sons with you, Ahimaaz your son, and Jonathan the son of Abiathar.ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.

28 Behold, I will stay at the fords of the wilderness, until word comes from you to inform me."ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.

29 Zadok therefore and Abiathar carried the ark of God again to Jerusalem: and they abode there.ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

30 David went up by the ascent of the [Mount of] Olives, and wept as he went up; and he had his head covered, and went barefoot: and all the people who were with him covered every man his head, and they went up, weeping as they went up.ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

31 One told David, saying, Ahithophel is among the conspirators with Absalom. David said, Yahweh, please turn the counsel of Ahithophel into foolishness.ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

32 It happened that when David had come to the top [of the ascent], where God was worshiped, behold, Hushai the Archite came to meet him with his coat torn, and earth on his head.ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.

33 David said to him, If you pass on with me, then you will be a burden to me:ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.

34 but if you return to the city, and tell Absalom, I will be your servant, O king; as I have been your father's servant in time past, so will I now be your servant; then will you defeat for me the counsel of Ahithophel.ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.

35 Don't you have Zadok and Abiathar the priests there with you? therefore it shall be, that whatever thing you shall hear out of the king's house, you shall tell it to Zadok and Abiathar the priests.ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.

36 Behold, they have there with them their two sons, Ahimaaz, Zadok's son, and Jonathan, Abiathar's son; and by them you shall send to me everything that you shall hear.ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.

37 So Hushai, David's friend, came into the city; and Absalom came into Jerusalem.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

Kannada Bible