ಯೆಶಾಯ 15:3 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 15 ಯೆಶಾಯ 15:3

Isaiah 15:3
ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.

Isaiah 15:2Isaiah 15Isaiah 15:4

Isaiah 15:3 in Other Translations

King James Version (KJV)
In their streets they shall gird themselves with sackcloth: on the tops of their houses, and in their streets, every one shall howl, weeping abundantly.

American Standard Version (ASV)
In their streets they gird themselves with sackcloth; on their housetops, and in their broad places, every one waileth, weeping abundantly.

Bible in Basic English (BBE)
In their streets they are covering themselves with haircloth: on the tops of their houses, and in their public places, there is crying and bitter weeping.

Darby English Bible (DBY)
In their streets they are girded with sackcloth; on their roofs, and in their broadways, every one howleth, melted into tears.

World English Bible (WEB)
In their streets they gird themselves with sackcloth; on their housetops, and in their broad places, everyone wails, weeping abundantly.

Young's Literal Translation (YLT)
In its out-places they girded on sackcloth, On its pinnacles, and in its broad places, Every one howleth -- going down with weeping.

In
their
streets
בְּחוּצֹתָ֖יוbĕḥûṣōtāywbeh-hoo-tsoh-TAV
they
shall
gird
חָ֣גְרוּḥāgĕrûHA-ɡeh-roo
sackcloth:
with
themselves
שָׂ֑קśāqsahk
on
עַ֣לʿalal
the
tops
גַּגּוֹתֶ֧יהָgaggôtêhāɡa-ɡoh-TAY-ha
streets,
their
in
and
houses,
their
of
וּבִרְחֹבֹתֶ֛יהָûbirḥōbōtêhāoo-veer-hoh-voh-TAY-ha
every
one
כֻּלֹּ֥הkullōkoo-LOH
shall
howl,
יְיֵלִ֖ילyĕyēlîlyeh-yay-LEEL
weeping
יֹרֵ֥דyōrēdyoh-RADE
abundantly.
בַּבֶּֽכִי׃babbekîba-BEH-hee

Cross Reference

ಯೋನ 3:6
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.

ಮತ್ತಾಯನು 11:21
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಯೆರೆಮಿಯ 48:38
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 19:13
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

ಯೆಶಾಯ 22:4
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.

ಯೆಶಾಯ 22:1
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?

ಯೆಶಾಯ 15:2
ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

2 ಅರಸುಗಳು 6:30
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.

2 ಸಮುವೇಲನು 3:31
ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

ಧರ್ಮೋಪದೇಶಕಾಂಡ 22:8
ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.