Isaiah 65:24
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
Isaiah 65:24 in Other Translations
King James Version (KJV)
And it shall come to pass, that before they call, I will answer; and while they are yet speaking, I will hear.
American Standard Version (ASV)
And it shall come to pass that, before they call, I will answer; and while they are yet speaking, I will hear.
Bible in Basic English (BBE)
And before they make their request I will give an answer, and while they are still making prayer to me, I will give ear.
Darby English Bible (DBY)
And it shall come to pass, that before they call, I will answer; while they are yet speaking, I will hear.
World English Bible (WEB)
It shall happen that, before they call, I will answer; and while they are yet speaking, I will hear.
Young's Literal Translation (YLT)
And it hath come to pass, They do not yet call, and I answer, They are yet speaking, and I hear.
| And it shall come to pass, | וְהָיָ֥ה | wĕhāyâ | veh-ha-YA |
| before that | טֶֽרֶם | ṭerem | TEH-rem |
| they call, | יִקְרָ֖אוּ | yiqrāʾû | yeek-RA-oo |
| I | וַאֲנִ֣י | waʾănî | va-uh-NEE |
| answer; will | אֶעֱנֶ֑ה | ʾeʿĕne | eh-ay-NEH |
| and while they | ע֛וֹד | ʿôd | ode |
| yet are | הֵ֥ם | hēm | hame |
| speaking, | מְדַבְּרִ֖ים | mĕdabbĕrîm | meh-da-beh-REEM |
| I | וַאֲנִ֥י | waʾănî | va-uh-NEE |
| will hear. | אֶשְׁמָֽע׃ | ʾešmāʿ | esh-MA |
Cross Reference
ದಾನಿಯೇಲನು 10:12
ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
1 ಯೋಹಾನನು 5:14
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
ಮಾರ್ಕನು 11:24
ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
ಯೆಶಾಯ 58:9
ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
ಕೀರ್ತನೆಗಳು 91:15
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.
ಕೀರ್ತನೆಗಳು 32:5
ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
ಕೀರ್ತನೆಗಳು 50:15
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ದಾನಿಯೇಲನು 9:20
ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಲೂಕನು 15:18
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಅಪೊಸ್ತಲರ ಕೃತ್ಯಗ 12:5
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 10:30
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
ಅಪೊಸ್ತಲರ ಕೃತ್ಯಗ 4:31
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.