ಙ್ಞಾನೋಕ್ತಿಗಳು 8:17 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 8 ಙ್ಞಾನೋಕ್ತಿಗಳು 8:17

Proverbs 8:17
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.

Proverbs 8:16Proverbs 8Proverbs 8:18

Proverbs 8:17 in Other Translations

King James Version (KJV)
I love them that love me; and those that seek me early shall find me.

American Standard Version (ASV)
I love them that love me; And those that seek me diligently shall find me.

Bible in Basic English (BBE)
Those who have given me their love are loved by me, and those who make search for me with care will get me.

Darby English Bible (DBY)
I love those that love me; and they that seek me early shall find me.

World English Bible (WEB)
I love those who love me. Those who seek me diligently will find me.

Young's Literal Translation (YLT)
I love those loving me, And those seeking me earnestly do find me.

I
אֲ֭נִיʾănîUH-nee
love
אֹהֲבַ֣יהʾōhăbayoh-huh-VAI
them
that
love
אֵהָ֑בʾēhābay-HAHV
early
me
seek
that
those
and
me;
וּ֝מְשַׁחֲרַ֗יûmĕšaḥărayOO-meh-sha-huh-RAI
shall
find
יִמְצָאֻֽנְנִי׃yimṣāʾunĕnîyeem-tsa-OO-neh-nee

Cross Reference

ಯೋಹಾನನು 14:21
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.

1 ಸಮುವೇಲನು 2:30
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

ಕೀರ್ತನೆಗಳು 91:14
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

ಯೋಹಾನನು 14:23
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.

ಯಾಕೋಬನು 1:5
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.

ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

1 ಯೋಹಾನನು 4:19
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

ಮತ್ತಾಯನು 6:33
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.

ಯೋಹಾನನು 16:27
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.

ಮತ್ತಾಯನು 7:7
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.

ಯೆಶಾಯ 45:19
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.

ಪ್ರಸಂಗಿ 12:1
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.

ಙ್ಞಾನೋಕ್ತಿಗಳು 1:28
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.

ಮಾರ್ಕನು 10:14
ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.