Exodus 2 - BBE (Kannada)
1 Now a man of the house of Levi took as his wife a daughter of Levi.ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
2 And she became with child and gave birth to a Son; and when she saw that he was a beautiful child, she kept him secretly for three months.ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
3 And when she was no longer able to keep him secret, she made him a basket out of the stems of water-plants, pasting sticky earth over it to keep the water out; and placing the baby in it she put it among the plants by the edge of the Nile.ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
4 And his sister took her place at a distance to see what would become of him.ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
5 Now Pharaoh's daughter came down to the Nile to take a bath, while her women were walking by the riverside; and she saw the basket among the river-plants, and sent her servant-girl to get it.ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
6 And opening it, she saw the child, and he was crying. And she had pity on him, and said, This is one of the Hebrews' children.ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
7 Then his sister said to Pharaoh's daughter, May I go and get you one of the Hebrew women to give him the breast?ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
8 And Pharaoh's daughter said to her, Go. And the girl went and got the child's mother.ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
9 And Pharaoh's daughter said to her, Take the child away and give it milk for me, and I will give you payment. And the woman took the child and gave it milk at her breast.ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
10 And when the child was older, she took him to Pharaoh's daughter and he became her son, and she gave him the name Moses, Because, she said, I took him out of the water.ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
11 Now when Moses had become a man, one day he went out to his people and saw how hard their work was; and he saw an Egyptian giving blows to a Hebrew, one of his people.ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
12 And turning this way and that, and seeing no one, he put the Egyptian to death, covering his body with sand.ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
13 And he went out the day after and saw two of the Hebrews fighting: and he said to him who was in the wrong, Why are you fighting your brother?ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
14 And he said, Who made you a ruler and a judge over us? are you going to put me to death as you did the Egyptian? And Moses was in fear, and said, It is clear that the thing has come to light.ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
15 Now when Pharaoh had news of this, he would have put Moses to death. But Moses went in flight from Pharaoh into the land of Midian: and he took his seat by a water-spring.ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
16 Now the priest of Midian had seven daughters: and they came to get water for their father's flock.ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
17 And the keepers of the sheep came up and were driving them away; but Moses got up and came to their help, watering their flock for them.ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
18 And when they came to Reuel their father, he said, How is it that you have come back so quickly today?ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
19 And they said, An Egyptian came to our help against the keepers of sheep and got water for us and gave it to the flock.ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
20 And he said to his daughters, Where is he? why have you let the man go? make him come in and give him a meal.ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
21 And Moses was happy to go on living with the man; and he gave his daughter Zipporah to Moses.ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
22 And she gave birth to a son, to whom he gave the name Gershom: for he said, I have been living in a strange land.ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
23 Now after a long time the king of Egypt came to his end: and the children of Israel were crying in their grief under the weight of their work, and their cry for help came to the ears of God.ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
24 And at the sound of their weeping the agreement which God had made with Abraham and Isaac and Jacob came to his mind.ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.
25 And God's eyes were turned to the children of Israel and he gave them the knowledge of himself.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Kannada Bible