Bible

Exodus 25 - WEB (Kannada)

1 Yahweh spoke to Moses, saying,ಆಗ ಕರ್ತನು ಮಾತನಾಡಿ ಮೋಶೆಗೆ--

2 "Speak to the children of Israel, that they take an offering for me. From everyone whose heart makes him willing you shall take my offering.ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.

3 This is the offering which you shall take from them: gold, silver, brass,ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ

4 blue, purple, scarlet, fine linen, goats' hair,ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು

5 rams' skins dyed red, sea cow hides, acacia wood,ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.

6 oil for the light, spices for the anointing oil and for the sweet incense,ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ

7 onyx stones, and stones to be set for the ephod and for the breastplate.ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.

8 Let them make me a sanctuary, that I may dwell among them.ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.

9 According to all that I show you, the pattern of the tent, and the pattern of all of its furniture, even so you shall make it.ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.

10 "They shall make an ark of acacia wood. Its length shall be two and a half cubits, its breadth a cubit and a half, and a cubit and a half its height.ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.

11 You shall overlay it with pure gold. Inside and outside shall you overlay it, and shall make a gold molding around it.ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.

12 You shall cast four rings of gold for it, and put them in its four feet. Two rings shall be on the one side of it, and two rings on the other side of it.ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.

13 You shall make poles of acacia wood, and overlay them with gold.ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,

14 You shall put the poles into the rings on the sides of the ark to carry the ark.ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.

15 The poles shall be in the rings of the ark. They shall not be taken from it.ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.

16 You shall put the testimony which I shall give you into the ark.ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.

17 You shall make a mercy seat of pure gold. Two and a half cubits shall be its length, and a cubit and a half its breadth.ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

18 You shall make two cherubim of hammered gold. You shall make them at the two ends of the mercy seat.ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.

19 Make one cherub at the one end, and one cherub at the other end. You shall make the cherubim on its two ends of one piece with the mercy seat.ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.

20 The cherubim shall spread out their wings upward, covering the mercy seat with their wings, with their faces toward one another. The faces of the cherubim shall be toward the mercy seat.ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.

21 You shall put the mercy seat on top of the ark, and in the ark you shall put the testimony that I will give you.ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.

22 There I will meet with you, and I will tell you from above the mercy seat, from between the two cherubim which are on the ark of the testimony, all that I command you for the children of Israel.ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.

23 "You shall make a table of acacia wood. Two cubits shall be its length, and a cubit its breadth, and one and a half cubits its height.ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.

24 You shall overlay it with pure gold, and make a gold molding around it.ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.

25 You shall make a rim of a handbreadth around it. You shall make a golden molding on its rim around it.ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.

26 You shall make four rings of gold for it, and put the rings in the four corners that are on its four feet.ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.

27 the rings shall be close to the rim, for places for the poles to carry the table.ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.

28 You shall make the poles of acacia wood, and overlay them with gold, that the table may be carried with them.ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.

29 You shall make its dishes, its spoons, its ladles, and its bowls to pour out offerings with. Of pure gold shall you make them.ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.

30 You shall set bread of the presence on the table before me always.ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

31 "You shall make a lampstand of pure gold. Of hammered work shall the lampstand be made, even its base, its shaft, its cups, its buds, and its flowers, shall be of one piece with it.ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.

32 There shall be six branches going out of its sides: three branches of the lampstand out of its one side, and three branches of the lampstand out of its other side;ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.

33 three cups made like almond blossoms in one branch, a bud and a flower; and three cups made like almond blossoms in the other branch, a bud and a flower, so for the six branches going out of the lampstand;ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.

34 and in the lampstand four cups made like almond blossoms, its buds and its flowers;ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.

35 and a bud under two branches of one piece with it, and a bud under two branches of one piece with it, and a bud under two branches of one piece with it, for the six branches going out of the lampstand.ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.

36 Their buds and their branches shall be of one piece with it, the whole of it one beaten work of pure gold.ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.

37 You shall make its lamps seven, and they shall light its lamps to give light to the space in front of it.ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

38 Its snuffers and its snuff dishes shall be of pure gold.ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.

39 It shall be made of a talent of pure gold, with all these accessories.ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.

40 See that you make them after their pattern, which has been shown to you on the mountain.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

Kannada Bible