Hebrews 13 - YLT (Kannada)
1 Let brotherly love remain;ಸಹೋದರ ಪ್ರೀತಿಯು ನೆಲೆಯಾಗಿರಲಿ.
2 of the hospitality be not forgetful, for through this unawares certain did entertain messengers;ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
3 be mindful of those in bonds, as having been bound with them, of those maltreated, as also yourselves being in the body;ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
4 honourable `is' the marriage in all, and the bed undefiled, and whoremongers and adulterers God shall judge.ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
5 Without covetousness the behaviour, being content with the things present, for He hath said, `No, I will not leave, no, nor forsake thee,'ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
6 so that we do boldly say, `The Lord `is' to me a helper, and I will not fear what man shall do to me.'ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7 Be mindful of those leading you, who did speak to you the word of God, whose faith -- considering the issue of the behaviour -- be imitating,ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
8 Jesus Christ yesterday and to-day the same, and to the ages;ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
9 with teachings manifold and strange be not carried about, for `it is' good that by grace the heart be confirmed, not with meats, in which they who were occupied were not profited;ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
10 we have an altar, of which to eat they have no authority who the tabernacle are serving,ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
11 for of those beasts whose blood is brought for sin into the holy places through the chief priest -- of these the bodies are burned without the camp.ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
12 Wherefore, also Jesus -- that he might sanctify through `his' own blood the people -- without the gate did suffer;ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
13 now, then, may we go forth unto him without the camp, his reproach bearing;ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
14 for we have not here an abiding city, but the coming one we seek;ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
15 through him, then, we may offer up a sacrifice of praise always to God, that is, the fruit of lips, giving thanks to His name;ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
16 and of doing good, and of fellowship, be not forgetful, for with such sacrifices God is well-pleased.ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
17 Be obedient to those leading you, and be subject, for these do watch for your souls, as about to give account, that with joy they may do this, and not sighing, for this `is' unprofitable to you.ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
18 Pray for us, for we trust that we have a good conscience, in all things willing to behave well,ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
19 and more abundantly do I call upon `you' to do this, that more quickly I may be restored to you.ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
20 And the God of the peace, who did bring up out of the dead the great shepherd of the sheep -- in the blood of an age-during covenant -- our Lord Jesus,ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
21 make you perfect in every good work to do His will, doing in you that which is well-pleasing before Him, through Jesus Christ, to whom `is' the glory -- to the ages of the ages! Amen.ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
22 And I entreat you, brethren, suffer the word of the exhortation, for also through few words I have written to you.ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
23 Know ye that the brother Timotheus is released, with whom, if he may come more shortly, I will see you.ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
24 Salute all those leading you, and all the saints; salute you doth those from Italy:ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.
25 the grace `is' with you all! Amen.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Kannada Bible