Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Hosea 4 KJV ASV BBE DBY WBT WEB YLT

Hosea 4 in Kannada WBT Compare Webster's Bible

Hosea 4

1 ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

2 ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

3 ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

4 ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.

5 ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.

6 ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

7 ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.

8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.

9 ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.

10 ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.

11 ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

12 ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.

13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.

14 ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.

15 ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.

16 ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.

17 ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.

18 ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.

19 ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close