Isaiah 19 - WEB (Kannada)
1 The burden of Egypt. Behold, Yahweh rides on a swift cloud, and comes to Egypt: and the idols of Egypt shall tremble at his presence; and the heart of Egypt shall melt in the midst of it.ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
2 I will stir up the Egyptians against the Egyptians: and they shall fight everyone against his brother, and everyone against his neighbor; city against city, [and] kingdom against kingdom.ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
3 The spirit of Egypt shall fail in the midst of it; and I will destroy the counsel of it: and they shall seek to the idols, and to the charmers, and to those who have familiar spirits, and to the wizards.ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
4 I will give over the Egyptians into the hand of a cruel lord; and a fierce king shall rule over them, says the Lord, Yahweh of Hosts.ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
5 The waters shall fail from the sea, and the river shall be wasted and become dry.ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
6 The rivers shall become foul; the streams of Egypt shall be diminished and dried up; the reeds and flags shall wither away.ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
7 The meadows by the Nile, by the brink of the Nile, and all the sown fields of the Nile, shall become dry, be driven away, and be no more.ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
8 The fishermen shall lament, and all those who cast angle into the Nile shall mourn, and those who spread nets on the waters shall languish.ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
9 Moreover those who work in combed flax, and those who weave white cloth, shall be confounded.ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
10 The pillars [of Egypt] shall be broken in pieces; all those who work for hire [shall be] grieved in soul.ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
11 The princes of Zoan are utterly foolish; the counsel of the wisest counselors of Pharaoh is become brutish: how do you say to Pharaoh, I am the son of the wise, the son of ancient kings?ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
12 Where then are your wise men? and let them tell you now; and let them know what Yahweh of Hosts has purposed concerning Egypt.ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
13 The princes of Zoan are become fools, the princes of Memphis are deceived; they have caused Egypt to go astray, who are the corner-stone of her tribes.ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
14 Yahweh has mixed a spirit of perverseness in the midst of her; and they have caused Egypt to go astray in every work of it, as a drunken man staggers in his vomit.ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
15 Neither shall there be for Egypt any work, which head or tail, palm-branch or rush, may do.ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
16 In that day shall the Egyptians be like women; and they shall tremble and fear because of the shaking of the hand of Yahweh of Hosts, which he shakes over them.ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
17 The land of Judah shall become a terror to Egypt; everyone to whom mention is made of it shall be afraid, because of the purpose of Yahweh of Hosts, which he purposes against it.ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
18 In that day there shall be five cities in the land of Egypt that speak the language of Canaan, and swear to Yahweh of hosts; one shall be called The city of destruction.ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
19 In that day shall there be an altar to Yahweh in the midst of the land of Egypt, and a pillar at the border of it to Yahweh.ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
20 It shall be for a sign and for a witness to Yahweh of Hosts in the land of Egypt; for they shall cry to Yahweh because of oppressors, and he will send them a savior, and a defender, and he will deliver them.ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
21 Yahweh shall be known to Egypt, and the Egyptians shall know Yahweh in that day; yes, they shall worship with sacrifice and offering, and shall vow a vow to Yahweh, and shall perform it.ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
22 Yahweh will strike Egypt, smiting and healing; and they shall return to Yahweh, and he will be entreated of them, and will heal them.ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
23 In that day shall there be a highway out of Egypt to Assyria, and the Assyrian shall come into Egypt, and the Egyptian into Assyria; and the Egyptians shall worship with the Assyrians.ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
24 In that day shall Israel be the third with Egypt and with Assyria, a blessing in the midst of the earth;ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.
25 because Yahweh of Hosts has blessed them, saying, Blessed be Egypt my people, and Assyria the work of my hands, and Israel my inheritance.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Kannada Bible