Isaiah 29:9 ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
Isaiah 29:9 in Other Translations
King James Version (KJV) Stay yourselves, and wonder; cry ye out, and cry: they are drunken, but not with wine; they stagger, but not with strong drink.
American Standard Version (ASV) Tarry ye and wonder; take your pleasure and be blind: they are drunken, but not with wine; they stagger, but not with strong drink.
Bible in Basic English (BBE) Be surprised and full of wonder; let your eyes be covered and be blind: be overcome, but not with wine; go with uncertain steps, but not because of strong drink.
Darby English Bible (DBY) Be astounded and astonished, blind yourselves and be blind! They are drunken, but not with wine; they stagger, but not with strong drink.
World English Bible (WEB) Stay you and wonder; take your pleasure and be blind: they are drunken, but not with wine; they stagger, but not with strong drink.
Young's Literal Translation (YLT) Tarry and wonder, look ye, yea, look, Be drunk, and not with wine, Stagger, and not with strong drink.
Read Full Chapter :
Isaiah 29
Cross Reference
ಯೆಶಾಯ 51:21
ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
ಯೆಶಾಯ 19:14
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ಯೆಶಾಯ 33:13
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
ಯೆಶಾಯ 29:10
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಯೆಶಾಯ 49:26
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಯೆಶಾಯ 51:17
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ಯೆರೆಮಿಯ 2:12
ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 23:9
ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ಯೆರೆಮಿಯ 25:27
ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
ಯೆಶಾಯ 1:2
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಪ್ರಲಾಪಗಳು 4:21
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.
ಹಬಕ್ಕೂಕ್ಕ 1:5
ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
ಮತ್ತಾಯನು 26:45
ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
ಮಾರ್ಕನು 14:41
ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
ಅಪೊಸ್ತಲರ ಕೃತ್ಯಗ 13:40
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಪ್ರಕಟನೆ 17:6
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ಯೆರೆಮಿಯ 51:7
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಯೆಶಾಯ 22:12
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಯೆಶಾಯ 28:7
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.