ಯೆಶಾಯ 40:29 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 40 ಯೆಶಾಯ 40:29

Isaiah 40:29
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

Isaiah 40:28Isaiah 40Isaiah 40:30

Isaiah 40:29 in Other Translations

King James Version (KJV)
He giveth power to the faint; and to them that have no might he increaseth strength.

American Standard Version (ASV)
He giveth power to the faint; and to him that hath no might he increaseth strength.

Bible in Basic English (BBE)
He gives power to the feeble, increasing the strength of him who has no force.

Darby English Bible (DBY)
He giveth power to the faint; and to him that hath no might he increaseth strength.

World English Bible (WEB)
He gives power to the faint; and to him who has no might he increases strength.

Young's Literal Translation (YLT)
He is giving power to the weary, And to those not strong He increaseth might.

He
giveth
נֹתֵ֥ןnōtēnnoh-TANE
power
לַיָּעֵ֖ףlayyāʿēpla-ya-AFE
to
the
faint;
כֹּ֑חַkōaḥKOH-ak
no
have
that
them
to
and
וּלְאֵ֥יןûlĕʾênoo-leh-ANE
might
אוֹנִ֖יםʾônîmoh-NEEM
he
increaseth
עָצְמָ֥הʿoṣmâohts-MA
strength.
יַרְבֶּֽה׃yarbeyahr-BEH

Cross Reference

ಯೆಶಾಯ 41:10
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಫಿಲಿಪ್ಪಿಯವರಿಗೆ 4:13
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

2 ಕೊರಿಂಥದವರಿಗೆ 12:9
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.

ಯೆರೆಮಿಯ 31:25
ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.

ಕೀರ್ತನೆಗಳು 29:11
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಕೊಲೊಸ್ಸೆಯವರಿಗೆ 1:11
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

ಜೆಕರ್ಯ 10:12
ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.

ಇಬ್ರಿಯರಿಗೆ 11:34
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

ಯೆಶಾಯ 50:4
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.

ಧರ್ಮೋಪದೇಶಕಾಂಡ 33:25
ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.

ಆದಿಕಾಂಡ 49:24
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,