Index
Full Screen ?
 

ಯೆರೆಮಿಯ 18:17

எரேமியா 18:17 ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 18

ಯೆರೆಮಿಯ 18:17
ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.

I
will
scatter
כְּרֽוּחַkĕrûaḥkeh-ROO-ak
east
an
with
as
them
קָדִ֥יםqādîmka-DEEM
wind
אֲפִיצֵ֖םʾăpîṣēmuh-fee-TSAME
before
לִפְנֵ֣יlipnêleef-NAY
the
enemy;
אוֹיֵ֑בʾôyēboh-YAVE
shew
will
I
עֹ֧רֶףʿōrepOH-ref
them
the
back,
וְלֹֽאwĕlōʾveh-LOH
and
not
פָנִ֛יםpānîmfa-NEEM
face,
the
אֶרְאֵ֖םʾerʾēmer-AME
in
the
day
בְּי֥וֹםbĕyômbeh-YOME
of
their
calamity.
אֵידָֽם׃ʾêdāmay-DAHM

Cross Reference

ಯೆರೆಮಿಯ 13:24
ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.

ಯೆರೆಮಿಯ 2:27
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.

ಹೋಶೇ 13:15
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.

ಕೀರ್ತನೆಗಳು 48:7
ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.

ಯೋಬನು 27:21
ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.

ಯೆರೆಮಿಯ 46:21
ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

ಯೆರೆಮಿಯ 32:33
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

ಙ್ಞಾನೋಕ್ತಿಗಳು 7:25
ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.

ನ್ಯಾಯಸ್ಥಾಪಕರು 10:13
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.

ಧರ್ಮೋಪದೇಶಕಾಂಡ 32:35
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.

ಧರ್ಮೋಪದೇಶಕಾಂಡ 31:17
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

ಧರ್ಮೋಪದೇಶಕಾಂಡ 28:64
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.

ಧರ್ಮೋಪದೇಶಕಾಂಡ 28:25
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

Chords Index for Keyboard Guitar