ಯೆರೆಮಿಯ 48:47 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 48 ಯೆರೆಮಿಯ 48:47

Jeremiah 48:47
ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

Jeremiah 48:46Jeremiah 48

Jeremiah 48:47 in Other Translations

King James Version (KJV)
Yet will I bring again the captivity of Moab in the latter days, saith the LORD. Thus far is the judgment of Moab.

American Standard Version (ASV)
Yet will I bring back the captivity of Moab in the latter days, saith Jehovah. Thus far is the judgment of Moab.

Bible in Basic English (BBE)
But still, I will let the fate of Moab be changed in the last days, says the Lord.

Darby English Bible (DBY)
But I will turn the captivity of Moab at the end of the days, saith Jehovah. Thus far is the judgement of Moab.

World English Bible (WEB)
Yet will I bring back the captivity of Moab in the latter days, says Yahweh. Thus far is the judgment of Moab.

Young's Literal Translation (YLT)
And I have turned back `to' the captivity of Moab, In the latter end of the days, An affirmation of Jehovah! Hitherto `is' the judgment of Moab.

Yet
will
I
bring
again
וְשַׁבְתִּ֧יwĕšabtîveh-shahv-TEE
captivity
the
שְׁבוּתšĕbûtsheh-VOOT
of
Moab
מוֹאָ֛בmôʾābmoh-AV
in
the
latter
בְּאַחֲרִ֥יתbĕʾaḥărîtbeh-ah-huh-REET
days,
הַיָּמִ֖יםhayyāmîmha-ya-MEEM
saith
נְאֻםnĕʾumneh-OOM
the
Lord.
יְהוָ֑הyĕhwâyeh-VA
Thus
far
עַדʿadad

הֵ֖נָּהhēnnâHAY-na
is
the
judgment
מִשְׁפַּ֥טmišpaṭmeesh-PAHT
of
Moab.
מוֹאָֽב׃môʾābmoh-AV

Cross Reference

ಯೆರೆಮಿಯ 49:39
ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 49:6
ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.

ಹೋಶೇ 3:5
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ದಾನಿಯೇಲನು 10:14
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

ದಾನಿಯೇಲನು 2:28
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ಯೆಹೆಜ್ಕೇಲನು 38:8
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.

ಯೆಹೆಜ್ಕೇಲನು 16:53
ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.

ಯೆರೆಮಿಯ 46:26
ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 30:24
ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.

ಯೆರೆಮಿಯ 23:20
ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.

ಯೆರೆಮಿಯ 12:15
ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.

ಯೆಶಾಯ 23:18
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.

ಯೆಶಾಯ 19:18
ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.

ಯೆಶಾಯ 18:7
ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್‌ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.

ಯೋಬನು 19:25
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;

ಧರ್ಮೋಪದೇಶಕಾಂಡ 31:29
ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.

ಧರ್ಮೋಪದೇಶಕಾಂಡ 4:30
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು

ಅರಣ್ಯಕಾಂಡ 24:14
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.