Luke 13:3
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
Luke 13:3 in Other Translations
King James Version (KJV)
I tell you, Nay: but, except ye repent, ye shall all likewise perish.
American Standard Version (ASV)
I tell you, Nay: but, except ye repent, ye shall all in like manner perish.
Bible in Basic English (BBE)
I say to you, It is not so: but if your hearts are not changed, you will all come to the same end.
Darby English Bible (DBY)
No, I say to you, but if ye repent not, ye shall all perish in the same manner.
World English Bible (WEB)
I tell you, no, but, unless you repent, you will all perish in the same way.
Young's Literal Translation (YLT)
No -- I say to you, but, if ye may not reform, all ye even so shall perish.
| I tell | οὐχί | ouchi | oo-HEE |
| you, | λέγω | legō | LAY-goh |
| Nay: | ὑμῖν | hymin | yoo-MEEN |
| but, | ἀλλ' | all | al |
| except | ἐὰν | ean | ay-AN |
| μὴ | mē | may | |
| repent, ye | μετανοῆτε | metanoēte | may-ta-noh-A-tay |
| ye shall all | πάντες | pantes | PAHN-tase |
| likewise | ὡσαύτως | hōsautōs | oh-SAF-tose |
| perish. | ἀπολεῖσθε | apoleisthe | ah-poh-LEE-sthay |
Cross Reference
ಮತ್ತಾಯನು 12:45
ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಪ್ರಕಟನೆ 2:21
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
ಅಪೊಸ್ತಲರ ಕೃತ್ಯಗ 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಲೂಕನು 23:28
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
ಲೂಕನು 21:22
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಲೂಕನು 19:42
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಲೂಕನು 13:5
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ಮತ್ತಾಯನು 24:21
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಮತ್ತಾಯನು 23:35
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಮತ್ತಾಯನು 22:7
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಮತ್ತಾಯನು 3:10
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.