Matthew 6:11
ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
Matthew 6:11 in Other Translations
King James Version (KJV)
Give us this day our daily bread.
American Standard Version (ASV)
Give us this day our daily bread.
Bible in Basic English (BBE)
Give us this day bread for our needs.
Darby English Bible (DBY)
give us to-day our needed bread,
World English Bible (WEB)
Give us today our daily bread.
Young's Literal Translation (YLT)
`Our appointed bread give us to-day.
| Give | τὸν | ton | tone |
| us | ἄρτον | arton | AR-tone |
| this day | ἡμῶν | hēmōn | ay-MONE |
| our | τὸν | ton | tone |
| ἐπιούσιον | epiousion | ay-pee-OO-see-one | |
| daily | δὸς | dos | those |
| ἡμῖν | hēmin | ay-MEEN | |
| bread. | σήμερον· | sēmeron | SAY-may-rone |
Cross Reference
ಙ್ಞಾನೋಕ್ತಿಗಳು 30:8
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ವಿಮೋಚನಕಾಂಡ 16:16
ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
ಲೂಕನು 11:3
ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
ಯೆಶಾಯ 33:16
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಮತ್ತಾಯನು 4:4
ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
1 ತಿಮೊಥೆಯನಿಗೆ 6:8
ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
ಕೀರ್ತನೆಗಳು 33:18
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಕೀರ್ತನೆಗಳು 34:10
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
ಯೋಬನು 23:12
ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
2 ಥೆಸಲೊನೀಕದವರಿಗೆ 3:12
ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
ಯೋಹಾನನು 6:31
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.