Bible

Proverbs 17 - KJV (Kannada)

1 Better is a dry morsel, and quietness therewith, than an house full of sacrifices with strife.1 ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.

2 A wise servant shall have rule over a son that causeth shame, and shall have part of the inheritance among the brethren.ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.

3 The fining pot is for silver, and the furnace for gold: but the LORD trieth the hearts.ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.

4 A wicked doer giveth heed to false lips; and a liar giveth ear to a naughty tongue.ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;

5 Whoso mocketh the poor reproacheth his Maker: and he that is glad at calamities shall not be unpunished.ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.

6 Children's children are the crown of old men; and the glory of children are their fathers.ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.

7 Excellent speech becometh not a fool: much less do lying lips a prince.ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.

8 A gift is as a precious stone in the eyes of him that hath it: whithersoever it turneth, it prospereth.ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.

9 He that covereth a transgression seeketh love; but he that repeateth a matter separateth very friends.ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.

10 A reproof entereth more into a wise man than an hundred stripes into a fool.ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.

11 An evil man seeketh only rebellion: therefore a cruel messenger shall be sent against him.ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.

12 Let a bear robbed of her whelps meet a man, rather than a fool in his folly.ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.

13 Whoso rewardeth evil for good, evil shall not depart from his house.ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.

14 The beginning of strife is as when one letteth out water: therefore leave off contention, before it be meddled with.ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

15 He that justifieth the wicked, and he that condemneth the just, even they both are abomination to the LORD.ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.

16 Wherefore is there a price in the hand of a fool to get wisdom, seeing he hath no heart to it?ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?

17 A friend loveth at all times, and a brother is born for adversity.ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.

18 A man void of understanding striketh hands, and becometh surety in the presence of his friend.ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.

19 He loveth transgression that loveth strife: and he that exalteth his gate seeketh destruction.ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.

20 He that hath a froward heart findeth no good: and he that hath a perverse tongue falleth into mischief.ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.

21 He that begetteth a fool doeth it to his sorrow: and the father of a fool hath no joy.ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.

22 A merry heart doeth good like a medicine: but a broken spirit drieth the bones.ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

23 A wicked man taketh a gift out of the bosom to pervert the ways of judgment.ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.

24 Wisdom is before him that hath understanding; but the eyes of a fool are in the ends of the earth.ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.

25 A foolish son is a grief to his father, and bitterness to her that bare him.ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.

26 Also to punish the just is not good, nor to strike princes for equity.ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.

27 He that hath knowledge spareth his words: and a man of understanding is of an excellent spirit.ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.

28 Even a fool, when he holdeth his peace, is counted wise: and he that shutteth his lips is esteemed a man of understanding.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.

Kannada Bible