Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Proverbs 18 KJV ASV BBE DBY WBT WEB YLT

Proverbs 18 in Kannada WBT Compare Webster's Bible

Proverbs 18

1 ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.

2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.

3 ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.

4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.

5 ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.

6 ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.

7 ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.

8 ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.

9 ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.

10 ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.

11 ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.

12 ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.

13 ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.

14 ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?

15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.

16 ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.

17 ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.

18 ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;

19 ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.

20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.

21 ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.

22 ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.

23 ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.

24 ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close