Cross Reference
ಙ್ಞಾನೋಕ್ತಿಗಳು 22:23
ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ಯೋಬನು 19:25
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ವಿಮೋಚನಕಾಂಡ 22:22
ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
ಧರ್ಮೋಪದೇಶಕಾಂಡ 27:19
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಕೀರ್ತನೆಗಳು 12:5
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಯೆರೆಮಿಯ 51:36
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
ಯೆರೆಮಿಯ 50:33
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.