1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.O give thanks unto the LORD, for he is good: for his mercy endureth for ever.
2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,Let the redeemed of the LORD say so, whom he hath redeemed from the hand of the enemy;
3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.And gathered them out of the lands, from the east, and from the west, from the north, and from the south.
4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,They wandered in the wilderness in a solitary way; they found no city to dwell in.
5ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.Hungry and thirsty, their soul fainted in them.
6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,Then they cried unto the LORD in their trouble, and he delivered them out of their distresses.
7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.And he led them forth by the right way, that they might go to a city of habitation.
8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.Oh that men would praise the LORD for his goodness, and for his wonderful works to the children of men!
9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.For he satisfieth the longing soul, and filleth the hungry soul with goodness.
10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರುSuch as sit in darkness and in the shadow of death, being bound in affliction and iron;
11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದBecause they rebelled against the words of God, and contemned the counsel of the most High:
12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.Therefore he brought down their heart with labour; they fell down, and there was none to help.
13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿThen they cried unto the LORD in their trouble, and he saved them out of their distresses.
14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.He brought them out of darkness and the shadow of death, and brake their bands in sunder.
15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.Oh that men would praise the LORD for his goodness, and for his wonderful works to the children of men!
16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.For he hath broken the gates of brass, and cut the bars of iron in sunder.
17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.Fools because of their transgression, and because of their iniquities, are afflicted.
18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.Their soul abhorreth all manner of meat; and they draw near unto the gates of death.
19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.Then they cry unto the LORD in their trouble, and he saveth them out of their distresses.
20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.He sent his word, and healed them, and delivered them from their destructions.
21ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.Oh that men would praise the LORD for his goodness, and for his wonderful works to the children of men!
22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.And let them sacrifice the sacrifices of thanksgiving, and declare his works with rejoicing.
23ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರುThey that go down to the sea in ships, that do business in great waters;
24ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.These see the works of the LORD, and his wonders in the deep.
25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.For he commandeth, and raiseth the stormy wind, which lifteth up the waves thereof.
26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.They mount up to the heaven, they go down again to the depths: their soul is melted because of trouble.
27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.They reel to and fro, and stagger like a drunken man, and are at their wit's end.
28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿThen they cry unto the LORD in their trouble, and he bringeth them out of their distresses.
29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.He maketh the storm a calm, so that the waves thereof are still.
30ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.Then are they glad because they be quiet; so he bringeth them unto their desired haven.
31ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.Oh that men would praise the LORD for his goodness, and for his wonderful works to the children of men!
32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.Let them exalt him also in the congregation of the people, and praise him in the assembly of the elders.
33ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂHe turneth rivers into a wilderness, and the watersprings into dry ground;
34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.A fruitful land into barrenness, for the wickedness of them that dwell therein.
35ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.He turneth the wilderness into a standing water, and dry ground into watersprings.
36ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,And there he maketh the hungry to dwell, that they may prepare a city for habitation;
37ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.And sow the fields, and plant vineyards, which may yield fruits of increase.
38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.He blesseth them also, so that they are multiplied greatly; and suffereth not their cattle to decrease.
39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.Again, they are minished and brought low through oppression, affliction, and sorrow.
40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.He poureth contempt upon princes, and causeth them to wander in the wilderness, where there is no way.
41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.Yet setteth he the poor on high from affliction, and maketh him families like a flock.
42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.The righteous shall see it, and rejoice: and all iniquity shall stop her mouth.
43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.Whoso is wise, and will observe these things, even they shall understand the lovingkindness of the LORD.