1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.Not unto us, O LORD, not unto us, but unto thy name give glory, for thy mercy, and for thy truth's sake.
2ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?Wherefore should the heathen say, Where is now their God?
3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.But our God is in the heavens: he hath done whatsoever he hath pleased.
4ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.Their idols are silver and gold, the work of men's hands.
5ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.They have mouths, but they speak not: eyes have they, but they see not:
6ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.They have ears, but they hear not: noses have they, but they smell not:
7ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,They have hands, but they handle not: feet have they, but they walk not: neither speak they through their throat.
8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.They that make them are like unto them; so is every one that trusteth in them.
9ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.O Israel, trust thou in the LORD: he is their help and their shield.
10ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.O house of Aaron, trust in the LORD: he is their help and their shield.
11ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.Ye that fear the LORD, trust in the LORD: he is their help and their shield.
12ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.The LORD hath been mindful of us: he will bless us; he will bless the house of Israel; he will bless the house of Aaron.
13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.He will bless them that fear the LORD, both small and great.
14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.The LORD shall increase you more and more, you and your children.
15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.Ye are blessed of the LORD which made heaven and earth.
16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.The heaven, even the heavens, are the LORD's: but the earth hath he given to the children of men.
17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.The dead praise not the LORD, neither any that go down into silence.
18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.But we will bless the LORD from this time forth and for evermore. Praise the LORD.