Psalm 49 - WEB (Kannada)
1 > Hear this, all you peoples. Listen, all you inhabitants of the world,ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
2 Both low and high, Rich and poor together.ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
3 My mouth will speak words of wisdom. My heart shall utter understanding.ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
4 I will incline my ear to a proverb. I will open my riddle on the harp.ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
5 Why should I fear in the days of evil, When iniquity at my heels surrounds me?ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
6 Those who trust in their wealth, And boast in the multitude of their riches--ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
7 None of them can by any means redeem his brother, Nor give God a ransom for him.ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
8 For the redemption of their life is costly, No payment is ever enough,ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
9 That he should live on forever, That he should not see corruption.ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
10 For he sees that wise men die; Likewise the fool and the senseless perish, And leave their wealth to others.ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
11 Their inward thought is that their houses will endure forever, And their dwelling places to all generations. They name their lands after themselves.ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
12 But man, despite his riches, doesn't endure. He is like the animals that perish.ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
13 This is the destiny of those who are foolish, And of those who approve their sayings. Selah.ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
14 They are appointed as a flock for Sheol. Death shall be their shepherd. The upright shall have dominion over them in the morning. Their beauty shall decay in Sheol, Far from their mansion.ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
15 But God will redeem my soul from the power of Sheol, For he will receive me. Selah.ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
16 Don't be afraid when a man is made rich, When the glory of his house is increased.ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
17 For when he dies he shall carry nothing away. His glory shall not descend after him.ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
18 Though while he lived he blessed his soul-- And men praise you when you do well for yourself--ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
19 He shall go to the generation of his fathers. They shall never see the light.ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.
20 A man who has riches without understanding, Is like the animals that perish.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Kannada Bible