Index
Full Screen ?
 

ಕೀರ್ತನೆಗಳು 63:3

Psalm 63:3 ಕನ್ನಡ ಬೈಬಲ್ ಕೀರ್ತನೆಗಳು ಕೀರ್ತನೆಗಳು 63

ಕೀರ್ತನೆಗಳು 63:3
ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.

Because
כִּיkee
thy
lovingkindness
ט֣וֹבṭôbtove
is
better
חַ֭סְדְּךָḥasdĕkāHAHS-deh-ha
life,
than
מֵֽחַיִּ֗יםmēḥayyîmmay-ha-YEEM
my
lips
שְׂפָתַ֥יśĕpātayseh-fa-TAI
shall
praise
יְשַׁבְּחֽוּנְךָ׃yĕšabbĕḥûnĕkāyeh-sha-beh-HOO-neh-ha

Cross Reference

ಕೀರ್ತನೆಗಳು 69:16
ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.

ಫಿಲಿಪ್ಪಿಯವರಿಗೆ 1:23
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ

ಯಾಕೋಬನು 3:5
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

1 ಕೊರಿಂಥದವರಿಗೆ 6:20
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

ರೋಮಾಪುರದವರಿಗೆ 12:1
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ಕೀರ್ತನೆಗಳು 51:15
ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.

ಕೀರ್ತನೆಗಳು 30:5
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

1 ಯೋಹಾನನು 3:2
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.

ಇಬ್ರಿಯರಿಗೆ 13:15
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.

ರೋಮಾಪುರದವರಿಗೆ 6:19
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.

ಹೋಶೇ 14:2
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.

ಕೀರ್ತನೆಗಳು 66:17
ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

ಕೀರ್ತನೆಗಳು 30:12
ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

ಕೀರ್ತನೆಗಳು 21:6
ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.

ಕೀರ್ತನೆಗಳು 4:6
ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.

Chords Index for Keyboard Guitar