Psalm 69 - WEB (Kannada)
1 > Save me, God, For the waters have come up to my neck!ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
2 I sink in deep mire, where there is no foothold. I have come into deep waters, where the floods overflow me.ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
3 I am weary with my crying. My throat is dry. My eyes fail, looking for my God.ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
4 Those who hate me without a cause are more than the hairs of my head. Those who want to cut me off, being my enemies wrongfully, are mighty. I have to restore what I didn't take away.ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
5 God, you know my foolishness. My sins aren't hidden from you.ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
6 Don't let those who wait for you be shamed through me, Lord Yahweh of Hosts. Don't let those who seek you be brought to dishonor through me, God of Israel.ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
7 Because for your sake, I have borne reproach. Shame has covered my face.ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
8 I have become a stranger to my brothers, An alien to my mother's children.ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
9 For the zeal of your house consumes me. The reproaches of those who reproach you have fallen on me.ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
10 When I wept and I fasted, That was to my reproach.ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
11 When I made sackcloth my clothing, I became a byword to them.ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
12 Those who sit in the gate talk about me. I am the song of the drunkards.ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
13 But as for me, my prayer is to you, Yahweh, in an acceptable time. God, in the abundance of your loving kindness, answer me in the truth of your salvation.ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
14 Deliver me out of the mire, and don't let me sink. Let me be delivered from those who hate me, and out of the deep waters.ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
15 Don't let the flood waters overwhelm me, Neither let the deep swallow me up. Don't let the pit shut its mouth on me.ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
16 Answer me, Yahweh, for your loving kindness is good. According to the multitude of your tender mercies, turn to me.ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
17 Don't hide your face from your servant, For I am in distress. Answer me speedily!ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
18 Draw near to my soul, and redeem it. Ransom me because of my enemies.ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
19 You know my reproach, my shame, and my dishonor. My adversaries are all before you.ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
20 Reproach has broken my heart, and I am full of heaviness. I looked for some to take pity, but there was none; For comforters, but I found none.ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
21 They also gave me gall for my food. In my thirst, they gave me vinegar to drink.ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
22 Let their table before them become a snare. May it become a retribution and a trap.ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
23 Let their eyes be darkened, so that they can't see. Let their backs be continually bent.ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
24 Pour out your indignation on them. Let the fierceness of your anger overtake them.ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
25 Let their habitation be desolate. Let no one dwell in their tents.ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
26 For they persecute him whom you have wounded. They tell of the sorrow of those whom you have hurt.ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
27 Charge them with crime upon crime. Don't let them come into your righteousness.ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
28 Let them be blotted out of the book of life, And not be written with the righteous.ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
29 But I am in pain and distress. Let your salvation, God, protect me.ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
30 I will praise the name of God with a song, And will magnify him with thanksgiving.ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
31 It will please Yahweh better than an ox, Or a bull that has horns and hoofs.ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
32 The humble have seen it, and are glad. You who seek after God, let your heart live.ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
33 For Yahweh hears the needy, And doesn't despise his captive people.ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
34 Let heaven and earth praise him; The seas, and everything that moves therein!ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
35 For God will save Zion, and build the cities of Judah. They shall settle there, and own it.ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.
36 The children also of his servants shall inherit it. Those who love his name shall dwell therein.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Kannada Bible