Base Word
גְּרָר
Short DefinitionGerar, a Philistine city
Long Definitiona Philistine town south of Gaza, modern 'Umm'
Derivationprobably from H1641; a rolling country
International Phonetic Alphabetɡɛ̆ˈrɔːr
IPA modɡɛ̆ˈʁɑːʁ
Syllablegĕrār
Dictionɡeh-RAWR
Diction Modɡeh-RAHR
UsageGerar
Part of speechn-pr-loc

ಆದಿಕಾಂಡ 10:19
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.

ಆದಿಕಾಂಡ 20:1
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 20:2
ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.

ಆದಿಕಾಂಡ 26:1
ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

ಆದಿಕಾಂಡ 26:6
ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

ಆದಿಕಾಂಡ 26:17
ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.

ಆದಿಕಾಂಡ 26:20
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.

ಆದಿಕಾಂಡ 26:26
ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.

2 ಪೂರ್ವಕಾಲವೃತ್ತಾ 14:13
ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.

2 ಪೂರ್ವಕಾಲವೃತ್ತಾ 14:14
ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்