Base Word
לוֹט
Short DefinitionLot, Abraham's nephew
Long Definitionson of Haran and Abraham's nephew who settled in Sodom and was delivered from its destruction by God
Derivationthe same as H3875
International Phonetic Alphabetlot̪’
IPA modlo̞wt
Syllablelôṭ
Dictionlote
Diction Modlote
UsageLot
Part of speechn-pr-m

ಆದಿಕಾಂಡ 11:27
ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.

ಆದಿಕಾಂಡ 11:31
ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್‌ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್‌ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.

ಆದಿಕಾಂಡ 12:4
ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

ಆದಿಕಾಂಡ 12:5
ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.

ಆದಿಕಾಂಡ 13:1
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.

ಆದಿಕಾಂಡ 13:5
ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.

ಆದಿಕಾಂಡ 13:7
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.

ಆದಿಕಾಂಡ 13:8
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

ಆದಿಕಾಂಡ 13:10
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ಆದಿಕಾಂಡ 13:11
ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.

Occurences : 33

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்