Base Word
עִלַּי
Short Definitionsupreme (i.e., God)
Long Definitionhighest, the Most High
Derivationcorresponding to H5942
International Phonetic Alphabetʕɪlˈlɑi̯
IPA modʕiˈlɑi̯
Syllableʿillay
Dictionil-LAI
Diction Modee-LAI
Usage(most) high
Part of speecha

ದಾನಿಯೇಲನು 3:26
ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ದಾನಿಯೇಲನು 4:2
ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.

ದಾನಿಯೇಲನು 4:17
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.

ದಾನಿಯೇಲನು 4:24
ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.

ದಾನಿಯೇಲನು 4:25
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.

ದಾನಿಯೇಲನು 4:32
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.

ದಾನಿಯೇಲನು 4:34
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ದಾನಿಯೇಲನು 5:18
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

ದಾನಿಯೇಲನು 5:21
ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

ದಾನಿಯೇಲನು 7:25
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்