Bible

Lamentations 1 - WEB (Kannada)

1 How does the city sit solitary, that was full of people! She has become as a widow, who was great among the nations! She who was a princess among the provinces is become tributary!ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!

2 She weeps sore in the night, and her tears are on her cheeks; Among all her lovers she has none to comfort her: All her friends have dealt treacherously with her; they are become her enemies.ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.

3 Judah is gone into captivity because of affliction, and because of great servitude; She dwells among the nations, she finds no rest: All her persecutors overtook her within the straits.ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

4 The ways of Zion do mourn, because none come to the solemn assembly; All her gates are desolate, her priests do sigh: Her virgins are afflicted, and she herself is in bitterness.ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

5 Her adversaries are become the head, her enemies prosper; For Yahweh has afflicted her for the multitude of her transgressions: Her young children are gone into captivity before the adversary.ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.

6 From the daughter of Zion all her majesty is departed: Her princes are become like harts that find no pasture, They are gone without strength before the pursuer.ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.

7 Jerusalem remembers in the days of her affliction and of her miseries all her pleasant things that were from the days of old: When her people fell into the hand of the adversary, and none did help her, The adversaries saw her, they did mock at her desolations.ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.

8 Jerusalem has grievously sinned; therefore she is become as an unclean thing; All who honored her despise her, because they have seen her nakedness: Yes, she sighs, and turns backward.ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.

9 Her filthiness was in her skirts; she didn't remember her latter end; Therefore is she come down wonderfully; she has no comforter: See, Yahweh, my affliction; for the enemy has magnified himself.ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

10 The adversary has spread out his hand on all her pleasant things: For she has seen that the nations are entered into her sanctuary, Concerning whom you did command that they should not enter into your assembly.ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

11 All her people sigh, they seek bread; They have given their pleasant things for food to refresh the soul: Look, Yahweh, and see; for I am become abject.ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

12 Is it nothing to you, all you who pass by? Look, and see if there be any sorrow like my sorrow, which is brought on me, With which Yahweh has afflicted [me] in the day of his fierce anger.ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.

13 From on high has he sent fire into my bones, and it prevails against them; He has spread a net for my feet, he has turned me back: He has made me desolate and faint all the day.ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.

14 The yoke of my transgressions is bound by his hand; They are knit together, they are come up on my neck; he has made my strength to fail: The Lord has delivered me into their hands, against whom I am not able to stand.ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.

15 The Lord has set at nothing all my mighty men in the midst of me; He has called a solemn assembly against me to crush my young men: The Lord has trodden as in a winepress the virgin daughter of Judah.ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.

16 For these things I weep; my eye, my eye runs down with water; Because the comforter who should refresh my soul is far from me: My children are desolate, because the enemy has prevailed.ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.

17 Zion spreads forth her hands; there is none to comfort her; Yahweh has commanded concerning Jacob, that those who are round about him should be his adversaries: Jerusalem is among them as an unclean thing.ಚೀಯೋನ್‌ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.

18 Yahweh is righteous; for I have rebelled against his commandment: Please hear all you peoples, and see my sorrow: My virgins and my young men are gone into captivity.ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

19 I called for my lovers, [but] they deceived me: My priests and my elders gave up the spirit in the city, While they sought them food to refresh their souls.ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

20 See, Yahweh; for I am in distress; my heart is troubled; My heart is turned within me; for I have grievously rebelled: Abroad the sword bereaves, at home there is as death.ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

21 They have heard that I sigh; there is none to comfort me; All my enemies have heard of my trouble; they are glad that you have done it: You will bring the day that you have proclaimed, and they shall be like me.ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.

22 Let all their wickedness come before you; Do to them, as you have done to me for all my transgressions: For my sighs are many, and my heart is faint.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.

Kannada Bible