Lamentations 5 - DBY (Kannada)
1 Remember, O Jehovah, what is come upon us; consider, and see our reproach.ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
2 Our inheritance is turned to strangers, our houses to aliens.ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
3 We are orphans and fatherless, our mothers are as widows.ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
4 Our water have we to drink for money, our wood cometh unto us for a price.ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
5 Our pursuers are on our necks: we are weary, we have no rest.ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
6 We have given the hand to Egypt, [and] to Asshur, to be satisfied with bread.ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
7 Our fathers have sinned, [and] they are not; and we bear their iniquities.ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
8 Bondmen rule over us: there is no deliverer out of their hand.ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
9 We have to get our bread at the risk of our lives, because of the sword of the wilderness.ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
10 Our skin gloweth like an oven, because of the burning heat of the famine.ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
11 They have ravished the women in Zion, the maids in the cities of Judah.ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
12 Princes were hanged up by their hand; the faces of elders were not honoured.ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
13 The young men have borne the mill, and the youths have stumbled under the wood.ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
14 The elders have ceased from the gate, the young men from their music.ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
15 The joy of our heart hath ceased; our dance is turned into mourning.ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
16 The crown is fallen from our head: woe unto us, for we have sinned!ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
17 For this our heart is faint; for these things our eyes have grown dim,ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
18 Because of the mountain of Zion, which is desolate: foxes walk over it.ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
19 Thou, Jehovah, dwellest for ever; thy throne is from generation to generation.ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
20 Wherefore dost thou forget us for ever, dost thou forsake us so long time?ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
21 Turn thou us unto thee, Jehovah, and we shall be turned; renew our days as of old.ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.
22 Or is it that thou hast utterly rejected us? Wouldest thou be exceeding wroth against us?ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Kannada Bible