Bible

Leviticus 14 - DBY (Kannada)

1 And Jehovah spoke to Moses, saying,ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

2 This shall be the law of the leper in the day of his cleansing: he shall be brought unto the priest,ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.

3 and the priest shall go out of the camp; and when the priest looketh, and behold, the sore of leprosy is healed in the leper,ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ

4 then shall the priest command to take for him that is to be cleansed two clean living birds, and cedar-wood, and scarlet, and hyssop.ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.

5 And the priest shall command that one bird be killed in an earthen vessel over running water:ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.

6 as to the living bird -- he shall take it, and the cedar-wood, and the scarlet, and the hyssop, and dip them and the living bird in the blood of the bird that was killed over the running water;ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ

7 and he shall sprinkle upon him that is to be cleansed from the leprosy seven times, and shall pronounce him clean, and shall let the living bird loose into the open field.ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

8 And he that is to be cleansed shall wash his garments, and shave all his hair, and bathe in water, and he shall be clean; and afterwards shall he come into the camp, and shall abide outside his tent seven days.ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.

9 And it shall come to pass on the seventh day, that he shall shave all his hair, his head, and his beard, and his eyebrows, even all his hair shall he shave, and he shall wash his garments, and shall bathe his flesh in water, and he is clean.ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.

10 And on the eighth day he shall take two he-lambs without blemish, and one yearling ewe-lamb without blemish, and three tenth parts of fine flour mingled with oil, for an oblation, and one log of oil.ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.

11 And the priest that cleanseth [him] shall present the man that is to be cleansed and those things before Jehovah, at the entrance of the tent of meeting.ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.

12 And the priest shall take one he-lamb, and present it for a trespass-offering, and the log of oil, and wave them as a wave-offering before Jehovah.ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.

13 And he shall slaughter the he-lamb at the place where the sin-offering and the burnt-offering are slaughtered, in a holy place; for as the sin-offering, so the trespass-offering is the priest's: it is most holy.ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.

14 And the priest shall take of the blood of the trespass-offering, and the priest shall put it on the tip of the right ear of him that is to be cleansed, and on the thumb of his right hand, and on the great toe of his right foot.ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.

15 And the priest shall take of the log of oil, and pour it into his, the priest's, left hand;ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

16 and the priest shall dip his right finger in the oil that is in his left hand, and shall sprinkle of the oil with his finger seven times before Jehovah.ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.

17 And of the rest of the oil that is in his hand shall the priest put on the tip of the right ear of him that is to be cleansed, and on the thumb of his right hand, and on the great toe of his right foot, upon the blood of the trespass-offering.ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.

18 And the remainder of the oil that is in the priest's hand he shall put upon the head of him that is to be cleansed, and the priest shall make atonement for him before Jehovah.ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

19 And the priest shall offer the sin-offering, and make atonement for him that is to be cleansed from his uncleanness; and afterwards shall he slaughter the burnt-offering.ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.

20 And the priest shall offer the burnt-offering and the oblation upon the altar; and the priest shall make atonement for him, and he shall be clean.ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.

21 But if he be poor, and his hand be not able to get it, then he shall take one lamb for a trespass-offering, for a wave-offering, to make atonement for him; and one tenth part of fine flour mingled with oil for an oblation; and a log of oil,ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ

22 and two turtle-doves, or two young pigeons, as his hand may be able to get: the one shall be a sin-offering, and the other a burnt-offering.ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.

23 And he shall bring them on the eighth day of his cleansing unto the priest, unto the entrance of the tent of meeting, before Jehovah.ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.

24 And the priest shall take the he-lamb of the trespass-offering, and the log of oil, and the priest shall wave them as a wave-offering before Jehovah.ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.

25 And he shall slaughter the he-lamb of the trespass-offering; and the priest shall take of the blood of the trespass-offering, and put it upon the tip of the right ear of him that is to be cleansed, and upon the thumb of his right hand, and on the great toe of his right foot.ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.

26 And the priest shall pour of the oil into [his], the priest's, left hand,ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು

27 and the priest shall sprinkle with his right finger of the oil that is in his left hand seven times before Jehovah.ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.

28 And the priest shall put of the oil that is in his hand upon the tip of the right ear of him that is to be cleansed, and upon the thumb of his right hand, and on the great toe of his right foot, upon the place of the blood of the trespass-offering.ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.

29 And the remainder of the oil that is in the priest's hand he shall put upon the head of him that is to be cleansed, to make atonement for him before Jehovah.ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.

30 And he shall offer one of the turtle-doves, or of the young pigeons, of what his hand was able to get;ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.

31 of what his hand was able to get shall the one be a sin-offering, and the other a burnt-offering, with the oblation; and the priest shall make atonement for him that is to be cleansed before Jehovah.ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.

32 This is the law for him in whom is the sore of leprosy, whose hand cannot get what is [regularly prescribed] in his cleansing.ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.

33 And Jehovah spoke to Moses and to Aaron, saying,ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

34 When ye come into the land of Canaan, which I give to you for a possession, and I put a leprous plague in a house of the land of your possession,ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್‌ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ

35 then he whose house it is shall come and tell the priest, saying, It seemeth to me like a plague in the house;ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.

36 and the priest shall command that they empty the house before the priest go into it to see the plague, that all that is in the house be not made unclean; and afterwards the priest shall go in to see the house.ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.

37 And when he looketh on the plague, and behold, the plague is in the walls of the house, greenish or reddish hollows, and their look is deeper than the surface of the wall,ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ

38 then the priest shall go out of the house to the entrance of the house, and shut up the house seven days.ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.

39 And the priest shall come again the seventh day, and when he looketh, and behold, the plague hath spread in the walls of the house,ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ

40 then the priest shall command that they take away the stones in which the plague is, and they shall cast them out of the city, in an unclean place.ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ

41 And he shall cause the house to be scraped within round about, and they shall pour out the mortar that they have scraped off, out of the city in an unclean place.ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ

42 And they shall take other stones, and put them in the place of those stones; and they shall take other mortar, and shall plaster the house.ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.

43 And if the plague come again, and break out in the house, after he hath taken away the stones, and after he hath scraped the house, and after it is plastered,ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ

44 then the priest shall come, and when he looketh, and behold, the plague hath spread in the house, it is a corroding leprosy in the house: it is unclean.ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.

45 And they shall break down the house, the stones of it, and the timber thereof, and all the mortar of the house, and shall carry them forth out of the city to an unclean place.ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

46 And he that goeth into the house as long as it is shut up shall be unclean until the even.ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.

47 And he that sleepeth in the house shall wash his garments, and he that eateth in the house shall wash his garments.ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.

48 But if the priest shall come in and look, and behold, the plague hath not spread in the house, after the house hath been plastered, the priest shall pronounce the house clean; for the plague is healed.ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.

49 And he shall take, to purge the house from the defilement, two birds, and cedar-wood, and scarlet, and hyssop;ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.

50 and he shall kill one bird in an earthen vessel over running water;ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.

51 and he shall take the cedar-wood and the hyssop and the scarlet, and the living bird, and dip them in the blood of the bird that was killed, and in the running water, and sprinkle the house seven times;ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

52 and he shall purge the house from the defilement with the blood of the bird, and with the running water, and with the living bird, and with the cedar-wood, and with the hyssop, and with the scarlet;ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.

53 and he shall let the living bird loose out of the city into the open field; and he shall make atonement for the house, and it is clean.ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.

54 This is the law for every sore of leprosy, and for the scall,ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ

55 and for the leprosy of garments, and of houses,ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ

56 and for the rising, and for the scab, and for the bright spot,ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.

57 to teach when there is uncleanness, and when it is purified: this is the law of leprosy.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.

Kannada Bible