Leviticus 14 - WEB (Kannada)
1 Yahweh spoke to Moses, saying,ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2 "This shall be the law of the leper in the day of his cleansing. He shall be brought to the priest,ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
3 and the priest shall go forth out of the camp. The priest shall examine him, and, behold, if the plague of leprosy is healed in the leper,ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
4 then the priest shall command them to take for him who is to be cleansed two living clean birds, and cedar wood, and scarlet, and hyssop.ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
5 The priest shall command them to kill one of the birds in an earthen vessel over running water.ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
6 As for the living bird, he shall take it, and the cedar wood, and the scarlet, and the hyssop, and shall dip them and the living bird in the blood of the bird that was killed over the running water.ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
7 He shall sprinkle on him who is to be cleansed from the leprosy seven times, and shall pronounce him clean, and shall let the living bird go into the open field.ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
8 "He who is to be cleansed shall wash his clothes, and shave off all his hair, and bathe himself in water; and he shall be clean. After that he shall come into the camp, but shall dwell outside his tent seven days.ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
9 It shall be on the seventh day, that he shall shave all his hair off his head and his beard and his eyebrows, even all his hair he shall shave off. He shall wash his clothes, and he shall bathe his body in water, then he shall be clean.ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
10 "On the eighth day he shall take two male lambs without blemish, and one ewe lamb a year old without blemish, and three tenths of an ephah of fine flour for a meal offering, mingled with oil, and one log of oil.ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
11 The priest who cleanses him shall set the man who is to be cleansed, and those things, before Yahweh, at the door of the Tent of Meeting.ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
12 "The priest shall take one of the male lambs, and offer him for a trespass offering, with the log of oil, and wave them for a wave offering before Yahweh.ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
13 He shall kill the male lamb in the place where they kill the sin offering and the burnt offering, in the place of the sanctuary; for as the sin offering is the priest's, so is the trespass offering. It is most holy.ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
14 The priest shall take some of the blood of the trespass offering, and the priest shall put it on the tip of the right ear of him who is to be cleansed, and on the thumb of his right hand, and on the big toe of his right foot.ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
15 The priest shall take some of the log of oil, and pour it into the palm of his own left hand.ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
16 The priest shall dip his right finger in the oil that is in his left hand, and shall sprinkle some of the oil with his finger seven times before Yahweh.ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
17 The priest shall put some of the rest of the oil that is in his hand on the tip of the right ear of him who is to be cleansed, and on the thumb of his right hand, and on the big toe of his right foot, upon the blood of the trespass offering.ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
18 The rest of the oil that is in the priest's hand he shall put on the head of him who is to be cleansed, and the priest shall make atonement for him before Yahweh.ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
19 "The priest shall offer the sin offering, and make atonement for him who is to be cleansed because of his uncleanness: and afterward he shall kill the burnt offering;ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
20 and the priest shall offer the burnt offering and the meal offering on the altar. The priest shall make atonement for him, and he shall be clean.ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
21 "If he is poor, and can't afford so much, then he shall take one male lamb for a trespass offering to be waved, to make atonement for him, and one tenth of an ephah of fine flour mingled with oil for a meal offering, and a log of oil;ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
22 and two turtledoves, or two young pigeons, such as he is able to afford; and the one shall be a sin offering, and the other a burnt offering.ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
23 "On the eighth day he shall bring them for his cleansing to the priest, to the door of the Tent of Meeting, before Yahweh.ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
24 The priest shall take the lamb of the trespass offering, and the log of oil, and the priest shall wave them for a wave offering before Yahweh.ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
25 He shall kill the lamb of the trespass offering. The priest shall take some of the blood of the trespass offering and put it on the tip of the right ear of him who is to be cleansed, and on the thumb of his right hand, and on the big toe of his right foot.ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
26 The priest shall pour some of the oil into the palm of his own left hand;ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
27 and the priest shall sprinkle with his right finger some of the oil that is in his left hand seven times before Yahweh.ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
28 Then the priest shall put some of the oil that is in his hand on the tip of the right ear of him who is to be cleansed, and on the thumb of his right hand, and on the big toe of his right foot, on the place of the blood of the trespass offering.ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
29 The rest of the oil that is in the priest's hand he shall put on the head of him who is to be cleansed, to make atonement for him before Yahweh.ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
30 He shall offer one of the turtledoves, or of the young pigeons, such as he is able to afford,ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
31 even such as he is able to afford, the one for a sin offering, and the other for a burnt offering, with the meal offering. The priest shall make atonement for him who is to be cleansed before Yahweh."ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
32 This is the law for him in whom is the plague of leprosy, who is not able to afford the sacrifice for his cleansing.ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
33 Yahweh spoke to Moses and to Aaron, saying,ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
34 "When you have come into the land of Canaan, which I give to you for a possession, and I put a spreading mildew in a house in the land of your possession,ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
35 then he who owns the house shall come and tell the priest, saying, 'There seems to me to be some sort of plague in the house.'ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
36 The priest shall command that they empty the house, before the priest goes in to examine the plague, that all that is in the house not be made unclean: and afterward the priest shall go in to inspect the house.ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
37 He shall examine the plague; and, behold, if the plague is in the walls of the house with hollow streaks, greenish or reddish, and it appears to be deeper than the wall;ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
38 then the priest shall go out of the house to the door of the house, and shut up the house seven days.ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
39 The priest shall come again on the seventh day, and look. If the plague has spread in the walls of the house,ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
40 then the priest shall command that they take out the stones in which is the plague, and cast them into an unclean place outside of the city:ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
41 and he shall cause the inside of the house to be scraped round about, and they shall pour out the mortar, that they scraped off, outside of the city into an unclean place.ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
42 They shall take other stones, and put them in the place of those stones; and he shall take other mortar, and shall plaster the house.ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
43 "If the plague comes again, and breaks out in the house, after he has taken out the stones, and after he has scraped the house, and after it was plastered;ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
44 then the priest shall come in and look; and, behold, if the plague has spread in the house, it is a destructive mildew in the house. It is unclean.ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
45 He shall break down the house, its stones, and its timber, and all the house's mortar. He shall carry them out of the city into an unclean place.ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
46 "Moreover he who goes into the house while it is shut up shall be unclean until the evening.ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
47 He who lies down in the house shall wash his clothes; and he who eats in the house shall wash his clothes.ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
48 "If the priest shall come in, and examine it, and, behold, the plague hasn't spread in the house, after the house was plastered, then the priest shall pronounce the house clean, because the plague is healed.ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
49 To cleanse the house he shall take two birds, and cedar wood, and scarlet, and hyssop.ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
50 He shall kill one of the birds in an earthen vessel over running water.ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
51 He shall take the cedar wood, and the hyssop, and the scarlet, and the living bird, and dip them in the blood of the slain bird, and in the running water, and sprinkle the house seven times.ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
52 He shall cleanse the house with the blood of the bird, and with the running water, with the living bird, with the cedar wood, with the hyssop, and with the scarlet;ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
53 but he shall let the living bird go out of the city into the open field. So shall he make atonement for the house; and it shall be clean."ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
54 This is the law for any plague of leprosy, and for an itch,ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
55 and for the destructive mildew of a garment, and for a house,ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ
56 and for a rising, and for a scab, and for a bright spot;ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.
57 to teach when it is unclean, and when it is clean. This is the law of leprosy.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Kannada Bible